ಚಿಕ್ಕಮಗಳೂರು: ಸುಹಾಸ್ ಹತ್ಯೆ ಖಂಡಿಸಿ ಇಂದು ಬಜರಂಗದಳ, ವಿಶ್ವ ಹಿಂದೂ ಪರಿಷದ್ ಸೇರಿದಂತೆ ಹಿಂದೂಪರ ಸಂಘಟನೆಗಳು ಚಿಕ್ಕಮಗಳೂ ಬಂದ್ ಗೆ ಕರೆ ನೀಡಿವೆ.

ಚಿಕ್ಕಮಗಳೂರು ನಗರದ ಹನುಮಂತಪ್ಪ ಸರ್ಕಲ್ ನಲ್ಲಿ ಘಟನೆ ಖಂಡಿಸಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಕೊಲೆಯಾಗಿರುವ ಸುಹಾಸ್ ಶೆಟ್ಟಿ ಪರ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಲಾಗಿದೆ. ಈ ವೇಳೆ ಪೊಲೀಸರು, ಕಾರ್ಯಕರ್ತರನ್ನು ವಶಕ್ಕೆ ಪಡೆದರು.

ಬಂದ್ ಘೋಷಿಸಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ನೂರಾರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದರು.