ಬೆಂಗಳೂರು: ಕನ್ನಡಪರ ಸಂಘಟನೆಗಳು ಮಾರ್ಚ್ 22ರಂದು ರಾಜ್ಯ ಬಂದ್ ಗೆ ಕರೆ ನೀಡಿವೆ. ಅಂದು ಪರೀಕ್ಷೆಗಳಿವೆ. ಹೀಗಾಗಿ ಪಾಲಕರು ಹಾಗೂ ವಿದ್ಯಾರ್ಥಿಗಳು ಗೊಂದಲದಲ್ಲಿದ್ದಾರೆ. ಈ ಮಧ್ಯೆ ಸರ್ಕಾರ ರಜೆಯ ಬಗ್ಗೆ ಮಾತನಾಡಿದೆ.
ಎಂಇಎಸ್, ಶಿವಸೇನೆ ಪುಂಡಾಟ ಖಂಡಿಸಿ ಮಾರ್ಚ್ 22ರಂದು ಕರ್ನಾಟಕ ಬಂದ್ (Karnataka Bandh) ಗೆ ಕರೆ ನೀಡಲಾಗಿದೆ. ಈ ಕುರಿತು ಇದುವರೆಗೂ ರಜೆಯ ಬಗ್ಗೆ ನಿರ್ಧಾರವಾಗಿಲ್ಲ. ಆದರೆ, ರಜೆಯ ಕುರಿತು ನಾಳೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ಈ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ.