ಬೆಂಗಳೂರು: ನಗರದ ವಿವಿ ಪುರಂ ಪ್ರದೇಶದಲ್ಲಿ ಶನಿವಾರ ಬೆಂಕಿ ಅವಘಡ ಸಂಭವಿಸಿದೆ. ಆರ್.ವಿ ರಸ್ತೆಯಲ್ಲಿರುವ ಟೈಲ್ಸ್ ಅಂಗಡಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಸದ್ಯಕ್ಕೆ ಈ ಅವಘಡದಲ್ಲಿ ಯಾರಿಗೂ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಸುರಕ್ಷತಾ ಕ್ರಮವಾಗಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕವನ್ನು ತಾತ್ಕಾಲಿಕವಾಗಿ ಕಡಿತಗೊಳಿಸಲಾಗಿದೆ.
ಬೆಂಕಿ ಅವಘಡಕ್ಕೆ ಕಾರಣವೇನು ಎಂಬುದರ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿದುಬರಬೇಕಿದೆ. ಸ್ಥಳದಲ್ಲಿ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ : ರಾಯಚೂರು | ಕಸದ ರಾಶಿಗೆ ಹಚ್ಚಿದ್ದ ಕಿಡಿ ತಗುಲಿ ಗೋದಾಮುವಿಗೆ ಬೆಂಕಿ : ಲಕ್ಷಾಂತರ ಮೌಲ್ಯ ನಷ್ಟ



















