ಬೆಂಗಳೂರು : ಹೊಸ ವರ್ಷದ ಮೊದಲ ದಿನವೇ ಬೆಂಗಳೂರು ಸಿಟಿ ವಿಶ್ವವಿದ್ಯಾಲಯದಲ್ಲಿ ಭಾರೀ ಅಕ್ರಮವೊಂದು ಬಯಲಾಗಿದೆ. ಬಿಕಾಂ ಐದನೇ ಸೆಮಿಸ್ಟರ್‌ನ ಪರೀಕ್ಷೆಯ ಪ್ರಶ್ನೆಪತ್ರಿಕೆ ಪರೀಕ್ಷೆಗಿಂತ ಮೊದಲೇ ಸೋರಿಕೆಯಾಗಿದ್ದು, ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ನಾಳೆ ನಡೆಯಬೇಕಿದ್ದ ಬಿಕಾಂ ಐದನೇ ಸೆಮಿಸ್ಟರ್‌ನ ‘ಅಡ್ವಾನ್ಸ್ ಅಕೌಂಟಿಂಗ್’ ಪರೀಕ್ಷೆಯ ಪ್ರಶ್ನೆಪತ್ರಿಕೆ ನಿನ್ನೆ ಸಂಜೆಯೇ ಲೀಕ್ ಆಗಿದೆ ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ನಿನ್ನೆ ಸಂಜೆಯಿಂದಲೇ ಪ್ರಶ್ನೆಪತ್ರಿಕೆಯ ಪ್ರತಿಗಳು ವಾಟ್ಸಾಪ್ ಗ್ರೂಪ್‌ಗಳಲ್ಲಿ ಹರಿದಾಡುತ್ತಿದೆ.
ಈ ವ್ಯವಸ್ಥಿತ ನಕಲು ದಂಧೆಯ ಹಿಂದೆ ಕೆಲವು ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ತಮ್ಮ ಕಾಲೇಜಿನ ಫಲಿತಾಂಶ ಉತ್ತಮವಾಗಿ ಬರಲಿ ಎಂಬ ಉದ್ದೇಶದಿಂದ ಪರೀಕ್ಷಾ ವಿಭಾಗದ ಸಿಬ್ಬಂದಿಯೊಂದಿಗೆ ಶಾಮೀಲಾಗಿ ಪ್ರಶ್ನೆಪತ್ರಿಕೆಯನ್ನು ಮೊದಲೇ ಪಡೆದಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ : ಕೋಗಿಲು ಅಕ್ರಮ ವಸತಿ ತೆರವು ಪ್ರಕರಣ | ಹೈಕೋರ್ಟ್ಗೆ ಪಿಐಎಲ್ ಸಲ್ಲಿಕೆ!



















