ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಎಲ್ಲೆಲ್ಲೂ ರಾಜಕಾರಣಿಗಳು ಮತ್ತು ರಾಜಕೀಯ ಪಕ್ಷಗಳ ನಾಯಕರ ಫ್ಲೆಕ್ಸ್ ಗಳು ರಾರಾಜಿಸುತ್ತಿರುವುದರ ಬಗ್ಗೆ ಹೈಕೋರ್ಟ್ ತೀವ್ರ ಅಸಮಧಾನ ಹೊರಹಾಕಿದೆ.
ಇದು ಗಾರ್ಡನ್ ಸಿಟಿಯಲ್ಲ, ಹೋರ್ಡಿಂಗ್ ಸಿಟಿ ಆಗಿ ಬದಲಾಗಿದೆ ಎಂದು ಹೈಕೋರ್ಟ್ ಬೇಸರ ವ್ಯಕ್ತಪಡಿಸಿದೆ. ಬಿಬಿಎಂ ಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹಿರಾತುಗಳು ಹಾಗೂ ಫ್ಲೆಕ್ಸ್ ಗಳನ್ನು ಶೀಘ್ರದಲ್ಲೇ ತೆರವುಗೊಳಿಸುವಂತೆ ಬಿಬಿಎಂಪಿಗೆ ಹೈಕೋರ್ಟ್ ಆದೇಶಿಸಿದರೂ ಪಾಲನೆ ಆಗುತ್ತಿಲ್ಲ. ಹೀಗಾಗಿ ನ್ಯಾಯಾಂಗ ನಿಂದನೆಯಾಗಿದೆ ಎಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಯಿತು.
ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೆ.ಎಸ್. ಮುದಗಲ್ ಹಾಗೂ ಪಿ. ಶ್ರೀಸುಧಾ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿದೆ. ಇದಕ್ಕೆ ಸಂಬಂಧಿಸಿದಂತೆ ಜು. 23ರೊಳಗೆ ವರದಿ ಸಲ್ಲಿಸಿ ಎಂದು ನಿರ್ದೇಶಿಸಿ ಹೈಕೋರ್ಟ್ ನ್ಯಾಯಪೀಠ ವಿಚಾರಣೆ