ಬೆಂಗಳೂರು: ಹೊಸ ವರ್ಷ ಸ್ವಾಗತಿಸಲು ಬೆಂಗಳೂರಿನಲ್ಲಿ ಭರ್ಜರಿ ಸಿದ್ಧತೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಅದರಂತೆ ಹೆಚ್ಚುವರಿ ಬಸ್ ಗಳ ಸೇವೆ ಒದಗಿಸಲು ಬಿಎಂಟಿಸಿ ಕೂಡ ನಿರ್ಧರಿಸಿದೆ.
ಎಂಜಿ ರೋಡ್, ಚರ್ಚ್ ಸ್ಟ್ರೀಟ್ ಸೇರಿದಂತೆ ನಗರದ ವಿವಿಧೆಡೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ನಿರೀಕ್ಷೆ ಇದೆ. ಹೀಗಾಗಿ ನಮ್ಮ ಮೆಟ್ರೋ ರೈಲು ಸೇವೆ ತಡರಾತ್ರಿ ಎರಡು ಗಂಟೆವರೆಗೂ ವಿಸ್ತರಣೆಯಾಗಿದೆ. ಬೆಂಗಳೂರಿನ ವಿವಿಧ ಭಾಗಗಳಿಂದ ರಾತ್ರಿ ಎರಡು ಗಂಟೆವರೆಗೆ ಹೆಚ್ಚುವರಿ ಬಸ್ಸುಗಳು ಸಂಚಾರ ಮಾಡಲಿವೆ.
ಎಂಜಿ ರಸ್ತೆಯಿಂದ ನಗರದ ವಿವಿಧ ಭಾಗಗಳಿಗೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಲಾಗುತ್ತಿದೆ. 13 ಸ್ಥಳಗಳಿಗೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿರುವುದಾಗಿ ಬಿಎಂಟಿಸಿ ಹೇಳಿದೆ. ರಾತ್ರಿ 11 ಗಂಟೆಯಿಂದ ರಾತ್ರಿ 2 ಗಂಟೆಯವರೆಗೆ ಹೆಚ್ಚುವರಿ ಬಸ್ ಸೇವೆ ದೊರೆಯಲಿದೆ.
ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಎಲೆಕ್ಟ್ರಾನಿಕ್ ಸಿಟಿ, ಜಿಗಣಿ, ಸರ್ಜಾಪುರ, ಕೆಂಗೇರಿ, ಜನಪ್ರಿಯ ಟೌನ್ಶಿಪ್, ನೆಲಮಂಗಲ, ಯಲಹಂಕ ಉಪನಗರ 5ನೇ ಹಂತ, ಬಾಗಲೂರು, ಹೊಸಕೋಟೆ, ಚನ್ನಸಂದ್ರ, ಕಾಡುಗೋಡಿ, ಬನಶಂಕರಿಗೆ ಹೆಚ್ಚುವರಿ ಬಸ್ ಓಡಾಟ ನಡೆಸಲಿವೆ. ಕೆಂಪೇಗೌಡ ಬಸ್ ನಿಲ್ದಾಣ, ಕೆ.ಆರ್.ಮಾರುಕಟ್ಟೆ, ಶಿವಾಜಿನಗರ, ಕೋರಮಂಗಲ, ಕಾಡುಗೋಡಿ, ಕೆಂಗೇರಿ, ಸುಮನಹಳ್ಳಿ, ಬನಶಂಕರಿ, ಗೊರಗುಂಟೆಪಾಳ್ಯ, ಯಶವಂತಪುರ, ಯಲಹಂಕ, ಶಾಂತಿನಗರ, ಹೆಬ್ಬಾಳ, ಸೆಂಟ್ರಲ್ ಸಿಲ್ಕ್ ಬೋರ್ಡ್ ನಿಂದ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.