ಬೆಂಗಳೂರು: ನಗರದಲ್ಲಿ ನಡೆದಿದ್ದ 7.11 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ತೂರು ಬಳಿಯ ನಿರ್ಜನ ಪ್ರದೇಶದ ರಸ್ತೆ ಬದಿಯಲ್ಲಿ ಹಣ ತುಂಬುವ ಸಿಎಂಎಸ್ ಕಂಪನಿಗೆ ಸೇರಿದ ಖಾಲಿ ಬಾಕ್ಸ್ ಗಳು ದೊರೆಕಿದ್ದು, ಅವುಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಇನ್ನು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಜಿ ಹಳ್ಳಿ ನಿವಾಸಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿ ವ್ಯಾಗನರ್‌ನಲ್ಲಿ ತಮಿಳುನಾಡಿಗೆ ಹೋಗಿದ್ದ. ಬಳಿಕ ಕುಪ್ಪಂನಲ್ಲಿ ಕಾರು ಬಿಟ್ಟು ಪರಾರಿಯಾಗಿದ್ದ. ಈತನನ್ನು ಆಂಧ್ರದ ವೇಲೂರು ಬಳಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಇನ್ನೂ ದರೋಡೆ ಮಾಡಿದ ಹಣದಲ್ಲಿ ನವೀನ್ ಎಂಬಾತನ ಮನೆಯಲ್ಲಿ ಐದೂವರೆ ಕೋಟಿ ಹಣ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.
ನಿನ್ನೆಯಷ್ಟೇ ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಕಾರು ಪತ್ತೆಯಾಗಿತ್ತು. ಕಾರು ಬಿಟ್ಟು ಬೇರೊಂದು ವಾಹನದಲ್ಲಿ ಹಣದ ಸಮೇತ ಪರಾರಿಯಾಗಿದ್ದಾರೆ. ಆರೋಪಿಗಳ ಪತ್ತೆಗೆ ಚಿತ್ತೂರು ಪೊಲೀಸರ ಜೊತೆಗೂಡಿ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಸದ್ಯ ಪೊಲೀಸರು ಖಾಲಿ ಬಾಕ್ಸ್ ಗಳನ್ನು ಪತ್ತೆ ಮಾಡಿ ಆರೋಪಿಗಳ ಬೆನ್ನು ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಪಾಪಿ ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರಕ್ಕೆ ಕುಮ್ಮಕ್ಕು | ಪೋಕ್ಸೋ ಪ್ರಕರಣ ದಾಖಲು



















