ಬೆಂಗಳೂರು: ರಾಜ ರಾಜಧಾನಿಯ ಜನರು ಈಗಾಗಲೇ ಮಳೆಯಿಂದಾಗಿ ಸಾಕಷ್ಟು ತೊಂದರೆಗೆ ಒಳಗಾಗಿದ್ದಾರೆ. ಹಲವೆಡೆ ಜನರ ಬದುಕಂತೂ ಮೂರಾಬಟ್ಟೆಯಾಗಿದೆ. ಈ ಮಧ್ಯೆ ಇನ್ನೂ ನಾಲ್ಕು ದಿನ ಇದೇ ರೀತಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೀಗಾಗಿ ಸಿಲಿಕಾನ್ ಸಿಟಿಯ ಜನರು ಗುರುವಾರ ಸೇರಿದಂತೆ ಇನ್ನೂ ನಾಲ್ಕು 4 ದಿನ ಮಳೆಯಲ್ಲೇ ಬದುಕಬೇಕಿದೆ. ಬೆಂಗಳೂರಿನಲ್ಲಿ (Bengaluru) ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ.
ಗುರುವಾರ ಬೆಳಿಗ್ಗೆಯಿಂದ ಕೂಡ ವ್ಯಾಪಕವಾಗಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇನ್ನುಳಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಾಸನ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿತ್ರದುರ್ಗ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಜನರು ಎಚ್ಚರಿಕೆಯಿಂದ ಇರಬೇಕೆಂದು ಹೇಳಿದೆ.