ಶಿವಮೊಗ್ಗ: ಉಡುಪಿಯಲ್ಲಿ ಬಾಂಗ್ಲಾ ಪ್ರಜೆಗಳು ಪತ್ತೆಯಾದ ಹಿನ್ನೆಲೆಯಲ್ಲಿ ಈಗ ಶಿವಮೊಗ್ಗ ನಗರದಲ್ಲಿ ಪತ್ತೆಯಾಗಿದ್ದಾರೆ. ಕಟ್ಟಡ ಕಾಮಗಾರಿ ಕೆಲಸ ಮಾಡುತ್ತಿದ್ದ ಬಾಂಗ್ಲಾ ಪ್ರಜೆಗಳನ್ನು ಈಗ ವಶಕ್ಕೆ ಪಡೆಯಲಾಗಿದೆ. ಜಯನಗರ ಠಾಣೆ ಪೊಲೀಸರ ಕಾರ್ಯಾಚರಣೆ ವೇಳೆ ಪತ್ತೆ ಆಗಿದ್ದಾರೆ.
ಬಾಂಗ್ಲಾ ಪ್ರಜೆಗಳ ಬಳಿ ಮಂಗಳೂರು ವಿಳಾಸ ಇರುವ ಆಧಾರ್ ಕಾರ್ಡ್ ಪತ್ತೆಯಾಗಿದೆ. ಬಾಂಗ್ಲಾದೇಶದ 7 ಜನ ಪ್ರಜೆಗಳನ್ನು ಜಯನಗರ ಠಾಣೆಗೆ ಕರೆದೊಯ್ದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇತ್ತೀಚೆಗಷ್ಟೇ ಪಾಕಿಸ್ತಾನಿ ಪ್ರಜೆಗಳು ವಾಸ್ತವ್ಯ ಹೂಡಿದ್ದು ಬಯಲಾಗಿತ್ತು. ಇದರ ಬೆನ್ನಲ್ಲೇ ಉಡುಪಿಯ ಮಲ್ಪೆಯಲ್ಲಿ ಬಾಂಗ್ಲಾ ದೇಶೀ ಪ್ರಜೆಗಳು ಇರುವುದು ಪತ್ತೆಯಾಗಿರುವುದು ಕೂಡ ಆತಂಕಕ್ಕೆ ಕಾರಣವಾಗಿದೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ತೆರಳಲು ಪ್ರಯತ್ನಿಸಿದ್ದ ಮಹಮ್ಮದ್ ಮಾಣಿಕ್ ಎಂಬಾತ ಮೊದಲು ಪೊಲೀಸರಿಗೆ ಸಿಕ್ಕಿಬಿದಿದ್ದರು. ಈತನನ್ನು ವಿಚಾರಣೆಗೆ ಒಳಪಡಿಸಿದಾಗ ಆತ ಮಲ್ಪೆಯಲ್ಲಿ ಇರುವವರ ಬಗ್ಗೆ ಮಾಹಿತಿ ನೀಡಿದ್ದ.