ಬಾಂಗ್ಲಾದೇಶದಲ್ಲಿ ಹಿಂದೂಗಳ ವಿರುದ್ಧ ಹೆಚ್ಚುತ್ತಿರುವ ಹಿಂಸಾಚಾರ ಹಾಗೂ ತಾರತಮ್ಯಕ್ಕೆ ಅಂತ್ಯ ಹಾಡಬೇಕೆಂದು 68 ನಿವೃತ್ತ ನ್ಯಾಯಮೂರ್ತಿಗಳು, ಅಧಿಕಾರಿಗಳು ಮತ್ತು ಹಾಲಿ ಸಂಸದರು ಪ್ರಧಾನಿ ಮೋದಿ ಅವರನ್ನು ಒತ್ತಾಯಿಸಿದ್ದಾರೆ.
ಬಾಂಗ್ಲಾದಲ್ಲಿ ಇಸ್ಕಾನ್ ನ ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಚಾರಿ ಬಂಧನಕ್ಕೆ ಸಂಬಂಧಿಸಿದಂತೆ ಮಧ್ಯಸ್ಥಿಕೆ ವಹಿಸಲು ಮನವಿ ಮಾಡಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಮಾಜಿ ಡಿಜಿಪಿ ಶೇಶ್ ಪಾಲ್ ವೈದ್, 68 ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳು, IAS, IPS, IRS, IIS, IFS ಮತ್ತು ರಾಜ್ಯ ಅಧಿಕಾರಿಗಳ ಗುಂಪು. ಇಸ್ಕಾನ್ನ ಚಿನ್ಮಯ್ ಕೃಷ್ಣ ಅವರ ಅನ್ಯಾಯದ ಬಂಧನ ಸೇರಿದಂತೆ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಕ್ರಮ ವಹಿಸಬೇಕೆಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.
ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಬಾಂಗ್ಲಾದೇಶದಲ್ಲಿ ಹಿಂದೂಗಳ ಸುರಕ್ಷತೆಯನ್ನು ಖಾತ್ರಿಪಡಿಸಿಕೊಳ್ಳಲು ಮತ್ತು ಯಾವುದೇ ತಪ್ಪಿಲ್ಲದೆ ಬಂಧನಕ್ಕೊಳಗಾಗಿರುವ ಚಿನ್ಮಯ್ ಕೃಷ್ಣ ದಾಸ್ ಮತ್ತು ಇತರ ಧಾರ್ಮಿಕ ಮುಖಂಡರ ಬಿಡುಗಡೆಗೆ ಒತ್ತಾಯಿಸಿ ತ್ವರಿತ ಕ್ರಮ ಕೈಗೊಳ್ಳುವಂತೆ ಪತ್ರದ ಮೂಲಕ ಮನವಿ ಮಾಡಲಾಗಿದೆ.
ಬಾಂಗ್ಲಾದೇಶದಲ್ಲಿರುವ ಹಿಂದೂಗಳಿಗೆ ತಕ್ಷಣದ ರಕ್ಷಣೆ ಕೊಡಬೇಕು. ಚಿನ್ಮಯ್ ಕೃಷ್ಣ ದಾಸ್ ಮತ್ತು ಇತರ ಧಾರ್ಮಿಕ ಮುಖಂಡರ ಬಿಡುಗಡೆ, ಹಿಂದೂ ಮಹಿಳೆಯರಿಗೆ ನ್ಯಾಯ, ಉದ್ಯೋಗ ಮತ್ತು ಆಸ್ತಿ ಹಕ್ಕುಗಳ ರಕ್ಷಣೆ ಮತ್ತು ಬಾಂಗ್ಲಾದೇಶದ ಮೇಲೆ ಅಂತರರಾಷ್ಟ್ರೀಯ ನಿರ್ಬಂಧಗಳ ಬಗ್ಗೆ ಭಾರತ ಸರ್ಕಾರವು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.