ಢಾಕಾ: ಬಾಂಗ್ಲಾದ (Bangladesh) ಹಿಂದೂ (Hindu) ಅಲ್ಪಸಂಖ್ಯಾತರ ಪ್ರಮುಖ ವಕೀಲ ಇಸ್ಕಾನ್ (ISKCON) ಸಂಸ್ಥೆಯ ಧಾರ್ಮಿಕ ನಾಯಕ ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಚಾರಿ (Chinmoy Krishna Das Brahmachari) ಅವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಬಾಂಗ್ಲಾ ತೊರೆಯಲು ಮುಂದಾಗುತ್ತಿದ್ದ ಸಂದರ್ಭದಲ್ಲಿ ಅವರನ್ನು ವಿಮಾನ ನಿಲ್ದಾಣದಲ್ಲಿ ಅರೆಸ್ಟ್ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಆದರೆ, ಬಂಧನದ ಕುರಿತು ಯಾವುದೇ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ.
ಬಾಂಗ್ಲಾದೇಶ ರಾಜಧಾನಿಯಲ್ಲಿ ಹಿಂದೂಗಳನ್ನು ಸೇರಿಸಿ ಬೃಹತ್ ಪ್ರತಿಭಟನೆ ನಡೆಸಿದ್ದಕ್ಕೆ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಚಾರಿ ಅವರು ಹಿಂದೂ ಸಂಘಟನೆಯಾದ ಇಸ್ಕಾನ್ ಸಂಸ್ಥಾಪಕರಲ್ಲಿ ಒಬ್ಬರು ಮತ್ತು ಬಾಂಗ್ಲಾದೇಶದ ಹಿಂದೂ ಅಲ್ಪಸಂಖ್ಯಾತರ ಪ್ರಮುಖ ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬಾಂಗ್ಲಾದೇಶದಲ್ಲಿ ಹಿಂದೂಗಳು ಸೇರಿದಂತೆ ಧಾರ್ಮಿಕ ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಬಗ್ಗೆ ಅವರು ಧ್ವನಿ ಎತ್ತಿದ್ದರು.