ಬೆಂಗಳೂರು: ಬ್ಯಾಂಕ್ ಆಫ್ ಬರೋಡಾದಲ್ಲಿ 500 ಆಫೀಸ್ ಅಸಿಸ್ಟಂಟ್ ಹುದ್ದೆಗಳು ಖಾಲಿ ಇದ್ದು, ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿರುವ ಬ್ರ್ಯಾಂಚ್ ಗಳಲ್ಲೇ 31 ಹುದ್ದೆಗಳು ಇರುವ ಕಾರಣ ಕನ್ನಡಿಗರಿಗೆ ಹೆಚ್ಚಿನ ಅವಕಾಶಗಳಿವೆ. ಮೇ 23ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ನೇಮಕಾತಿ ಹೇಗೆ?
- ಅರ್ಜಿ ಸಲ್ಲಿಸಿದವರಿಗೆ ಆನ್ಲೈನ್ ಟೆಸ್ಟ್ ಮತ್ತು ಕನ್ನಡ ಭಾಷಾ ಪರೀಕ್ಷೆ ನಡೆಸಲಾಗುತ್ತದೆ
- 100 ಅಂಕಗಳಿಗೆ ಪರಿಕ್ಷೆ ನಡೆಸಲಾಗುತ್ತದೆ
- ಇಂಗ್ಲಿಷ್ ಭಾಷೆ, ಸಾಮಾನ್ಯ ಜ್ಞಾನ, ಎಸ್ ಎಸ್ ಎಲ್ ಸಿ ಹಂತದ ಗಣಿತ, ರೀಸನಿಂಗ್ ಕುರಿತ ಪ್ರಶ್ನೆಗಳು ಇರುತ್ತವೆ.
- ಆಯ್ಕೆಯಾದ ಅಭ್ಯರ್ಥಿಗಳಿಗೆ 6 ತಿಂಗಳ ಪ್ರೊಬೇಷನರಿ ಪೀರಿಯಡ್ ಇರುತ್ತದೆ.
ಅಭ್ಯರ್ಥಿಗಳು https://ibpsonline.ibps.in/bobapr25/ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸಾಮಾನ್ಯ, ಆರ್ಥಿಕವಾಗಿ ಹಿಂದುಳಿದವರು, ಒಬಿಸಿ ಅಭ್ಯರ್ಥಿಗಳಿಗೆ 600 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ, ಮಾಜಿ ಸೈನಿಕರು ಹಾಗೂ ಮಹಿಳಾ ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕವಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 26 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ಕರ್ನಾಟಕದಲ್ಲಿ ಅರ್ಜಿ ಸಲ್ಲಿಸುವವರಿಗೆ ಕನ್ನಡ ಭಾಷೆ ಬಲ್ಲವರಾಗಿರಬೇಕು. ಎಸ್ಸೆಸ್ಸೆಲ್ಸಿ ಪಾಸಾದವರು ಕೂಡ ಅರ್ಜಿ ಸಲ್ಲಿಸಬಹುದಾಗಿದೆ. ಬೇರೆ ರಾಜ್ಯಗಳಲ್ಲಿ ಅರ್ಜಿ ಸಲ್ಲಿಸುವವರಿಗೆ ಆಯಾ ರಾಜ್ಯದ ಸ್ಥಳೀಯ ಭಾಷೆ ಬಲ್ಲವರಾಗಿರಬೇಕು ಎಂಬ ನಿಯಮವಿದೆ.