ಬೆಂಗಳೂರು: ನೀವು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆರಿಯರ್ ರೂಪಿಸಿಕೊಳ್ಳಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಶುಭ ಸಮಾಚಾರ ಸಿಕ್ಕಿದೆ. ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ 837 ಸಾವಿರ ಹುದ್ದೆಗಳ (Bank Of Baroda Recruitment 2026) ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಗ್ರೂಪ್ ಹೆಡ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಬ್ಯಾಂಕ್ ಆಫ್ ಬರೋಡಾ
ಒಟ್ಟು ಹುದ್ದೆಗಳು: 837
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 24
ಉದ್ಯೋಗದ ಸ್ಥಳ: ದೇಶಾದ್ಯಂತ
ಗ್ರೂಪ್ ಹೆಡ್, ಹೆಡ್ ಇನ್ವೆಸ್ಟ್ ಮೆಂಟ್, ಇನ್ವೆಸ್ಟ್ ಮೆಂಟ್ ಪ್ರಾಡಕ್ಟ್ ಮ್ಯಾನೇಜರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಕರ್ನಾಟಕ ಸೇರಿ ದೇಶಾದ್ಯಂತ ಇರುವ ಬ್ರ್ಯಾಂಚ್ ಗಳಲ್ಲಿ ಕೆಲಸ ಮಾಡಲು ಸಿದ್ಧರಿರುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಪದವಿ ಮುಗಿಸಿದವರು ಸಲ್ಲಿಸಲು ಅರ್ಹರಾಗಿದ್ದಾರೆ.
ಕನಿಷ್ಠ 24 ವರ್ಷದಿಂದ 50 ವರ್ಷದೊಳಗಿನವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಒಬಿಸಿ ಸಮುದಾಯದವರಿಗೆ ಮೂರು ವರ್ಷ ಹಾಗೂ ಎಸ್ಸಿ, ಎಸ್ಟಿಯವರಿಗೆ ಐದು ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿಯವರಿಗೆ 175 ರೂಪಾಯಿ ಅರ್ಜಿ ಶುಲ್ಕವಿದ್ದರೆ, ಜನರಲ್, ಒಬಿಸಿಯವರಿಗೆ 850 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು bankofbaroda.bank.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.



















