ಬೆಂಗಳೂರು: ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 115 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಇದರೊಂದಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭವಿಷ್ಯ ಕಂಡುಕೊಳ್ಳಬೇಕು ಎಂದು ಬಯಸುತ್ತಿರುವವರಿಗೆ ಒಳ್ಳೆಯ ಅವಕಾಶ ದೊರೆತಂತಾಗಿದೆ. ಹೌದು, ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 115 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ (Bank Of India SO Recruitment 2025) ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಬ್ಯಾಂಕ್ ಆಫ್ ಇಂಡಿಯಾ
ಹುದ್ದೆಗಳ ಹೆಸರು: ಸ್ಪೆಷಲಿಸ್ಟ್ ಆಫೀಸರ್
ಒಟ್ಟು ಹುದ್ದೆಗಳು: 115
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 30
ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಸಿಎ, ಬಿಎಸ್ಸಿ, ಬಿ.ಇ, ಬಿ.ಟೆಕ್, ಎಂಸಿಎ, ಎಂಎಸ್ಸಿ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1.2 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಗರಿಷ್ಠ 45 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ.
ಜನರಲ್ ಹಾಗೂ ಒಬಿಸಿಯವರಿಗೆ 850 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ ಯಾವುದೇ ಶುಲ್ಕ ಇರುವುದಿಲ್ಲ. ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿಯವರಿಗೆ 175 ರೂ. ಅರ್ಜಿ ಶುಲ್ಕವಿದೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷ ಮತ್ತು ಜನರಲ್ ಹಾಗೂ ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಮೊದಲಿಗೆ ಅರ್ಜಿಗಳನ್ನು ಪರಿಶೀಲನೆ ಮಾಡಲಾಗುತ್ತದೆ. ಲಿಖಿತ ಪರೀಕ್ಷೆಯ ನಂತರ ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರು https://bankofindia.bank.in/ ವೆಬ್ ಸೈಟ್ ಗೆ ಭೇಟಿ ನೀಡಬಹುದು.
ಇದನ್ನೂ ಓದಿ: ESICಯಲ್ಲಿ 41 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : 1.4 ಲಕ್ಷ ರೂಪಾಯಿ ಸಂಬಳ



















