ಬೆಂಗಳೂರು: ನೀವು ಡಿಗ್ರಿ ಮುಗಿಸಿ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ಚಿಂತೆ ಬೇಡ. ದೇಶಾದ್ಯಂತ ಬ್ರ್ಯಾಂಚ್ ಗಳನ್ನು ಹೊಂದಿರುವ ಬ್ಯಾಂಕ್ ಆಫ್ ಮಹಾರಾಷ್ಟ್ರ (Bank of Maharashtra Recruitment 2025) ಈಗ 500 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಜನರಲಿಸ್ಟ್ ಆಫೀಸರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆಗಸ್ಟ್ 30 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಬ್ಯಾಂಕ್ ಆಫ್ ಮಹಾರಾಷ್ಟ್ರ
ಖಾಲಿ ಇರುವ ಹುದ್ದೆಗಳು: 500
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಆಗಸ್ಟ್ 30
ಕನಿಷ್ಠ 22ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಗರಿಷ್ಠ ಶೇ.60ರಷ್ಟು ಅಂಕಗಳೊಂದಿಗೆ ಪದವಿ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ವಿನಾಯಿತಿ ಇದೆ.
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 118 ರೂಪಾಯಿ ಅರ್ಜಿ ಶುಲ್ಕವಿದ್ದರೆ, ಜನರಲ್, ಒಬಿಸಿ, ಇಡಬ್ಲ್ಯೂಎಸ್ ಸಮುದಾಯದವರಿಗೆ 1,180 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 93 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಅಧಿಕೃತ bankofmaharashtra.in. ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.