ಮಂಗಳೂರು: ಕಳೆದ ಮೇ. 27ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಬ್ದುಲ್ ರೆಹಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಮುಖ ಬೆಳವಣಿಗೆ ಸಂಭವಿಸಿದೆ. ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ (KCOCA-2000) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಈಗಾಗಲೇ 12 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿಸಿರುವ ಪೊಲೀಸರು ಆ.10 ರಂದು ರಂಜಿತ್ ಯಾನೆ ರಂಜು (35) ಎಂಬಾತನನ್ನು ಬಂಧಿಸಿದ್ದಾರೆ.
ಪೋಲಿಸರಿಂದ ತನಿಖೆ ನಡೆದಿದ್ದು, ಬಂಟ್ವಾಳದ ಕುರಿಯಾಳ ನಿವಾಸಿ ದೀಪಕ್ (21), ಅಮ್ಮುಂಜೆ ನಿವಾಸಿ ಪೃಥ್ವಿರಾಜ್ (21), ಅಮ್ಮುಂಜೆ ನಿವಾಸಿ ಚಿಂತನ್ (19), ಸುಮಿತ್, ರವಿರಾಜ್ ಬಂಧಿತ ಆರೋಪಿಗಳು ಹಳೇ ದ್ವೇಷದ ಹಿನ್ನೆಲೆ ಈ ಹತ್ಯೆ ನಡೆಸಿದ್ದಾರೆ ಎನ್ನುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಇದೀಗ ಆರೋಪಿಯನ್ನು ಬಂಧಿಸಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹಿಂದೂಪರ ಸಂಘಟನೆ ಮುಖಂಡ ಭರತ್ ಕುಮ್ಡೇಲು ವಿರುದ್ಧವೂ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಬಂಧನ ಭೀತಿ ಹಿನ್ನೆಲೆ ಭರತ್ ತಲೆಮರೆಸಿಕೊಂಡಿದ್ದಾರೆ.
ಹಲವು ವರ್ಷಗಳಿಂದ ಕೊಲೆ, ಕೊಲೆ ಯತ್ನ, ಪ್ರಚೋದನಕಾರಿ ಭಾಷಣಗಳು, ಕಾನೂನುಬಾಹಿರ ಚಟುವಟಿಕೆ, ಸಮಾಜದಲ್ಲಿ ಅಶಾಂತಿ ಮತ್ತು ಕೋಮು ಸಂಘರ್ಷಕ್ಕೆ ಕಾರಣರಾಗಿದ್ದಾರೆ ಎಂದು ಆರೋಪಿಸಲಾಗಿದೆ.