ಬೆಂಗಳೂರು: ಬಾರ್ ನಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆಯಾಗಿರುವ ಘಟನೆ ನಡೆದಿದೆ.
ಜಯರಾಮ್ ಕೊಲೆಯಾಗಿರುವ ರೌಡಿ ಶೀಟರ್ ಎನ್ನಲಾಗಿದೆ. ಯಲಹಂಕ ಪೊಲೀಸ್ ಠಾಣೆಯ ರೌಡಿಶೀಟರ್ ಜಯರಾಮ್ ನನ್ನು ಬಾರ್ ನಲ್ಲಿದ್ದಾಗ ನಾಲ್ಕೈದು ಜನರ ಗುಂಪು ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಹತ್ಯೆ ಮಾಡಿದೆ ಎನ್ನಲಾಗಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಸ್ಥಳಕ್ಕೆ ಸೋಲದೇವನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹತ್ಯೆಯಾಗಿರುವ ರೌಡಿಶೀಟರ್, ಯಲಹಂಕ ಬಿಟ್ಟು ತಿರುಮಳಾಪುರದಲ್ಲಿ ವಾಸ ಮಾಡುತ್ತಿದ್ದ. ಈತ ಕೋಳಿ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ. ಇಂದು ಸಂಜೆ 7.30ಕ್ಕೆ ಬಾರ್ ಗೆ ಬಂದಿದ್ದ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.