ಬೆಂಗಳೂರು: ನೀವೇನಾದರೂ ಕೇಂದ್ರ ಸರ್ಕಾರದ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಲಕ್ಷಾಂತರ ರೂಪಾಯಿ ಸಂಬಳ ಬರುವ ಉದ್ಯೋಗಕ್ಕೆ ಹಂಬಲಿಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾಭಾ ಆಟೋಮಿಕ್ ರಿಸರ್ಚ್ ಸೆಂಟರ್ ನಲ್ಲಿ (BARC Recruitment 2026) ಖಾಲಿ ಇರುವ 21 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಈ ಕೆಳಗಿನಂತಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾಭಾ ಆಟೋಮಿಕ್ ರಿಸರ್ಚ್ ಸೆಂಟರ್ (BARC)
ಒಟ್ಟು ಹುದ್ದೆಗಳು: 21
ಹುದ್ದೆಗಳ ಹೆಸರು: ಸೈಂಟಿಫಿಕ್ ಆಫೀಸರ್, ಟೆಕ್ನಿಕಲ್ ಆಫೀಸರ್
ಉದ್ಯೋಗ ಸ್ಥಳ: ಮುಂಬೈ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 27
ಕಾರ್ಡಿಯಾಲಜಿ, ಹಾಸ್ಪಿಟಲ್ ಅಡ್ಮಿನಿಸ್ಟ್ರೇಟರ್, ಇಎನ್ ಟಿ, ನ್ಯೂಕ್ಲಿಯರ್ ಮೆಡಿಸಿನ್ ಸೇರಿ ಹಲವು ವಿಭಾಗಗಳಲ್ಲಿ ಖಾಲಿ ಇರುವ ಸೈಂಟಿಫಿಕ್ ಆಫೀಸರ್, ಟೆಕ್ನಿಕಲ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಎಂಬಿಬಿಎಸ್, ಎಂಎಸ್ಸಿ, ಎಂಡಿ, ಡಿಎನ್ ಬಿ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 2.08 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದ್ದರೆ, ಒಬಿಸಿಯವರಿಗೆ 3 ವರ್ಷಗಳ ಸಡಿಲಿಕೆ ಇದೆ. ಜನರಲ್, ಒಬಿಸಿ, ಇಡಬ್ಲ್ಯೂಎಸ್ ನವರಿಗೆ 500 ರೂಪಾಯಿ ಅರ್ಜಿ ಶುಲ್ಕವಿದ್ದರೆ, ಉಳಿದವರಿಗೆ ಯಾವುದೇ ಶುಲ್ಕವಿರುವುದಿಲ್ಲ. ಸಂದರ್ಶನ, ಲಿಖಿತ ಪರೀಕ್ಷೆ, ಕೌಶಲ ಪರೀಕ್ಷೆ ಹಾಗೂ ದಾಖಲೆ ಪರಿಶೀಲನೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. barc.gov.in ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಮಾರುಕಟ್ಟೆ ಏರಿಳಿತದ ಹೊತ್ತಿನಲ್ಲೇ ಹೊಸ ಮ್ಯೂಚುವಲ್ ಫಂಡ್ ಆರಂಭಿಸಿದ SBI | ಏನಿದರ ವಿಶೇಷ?



















