ಬಂಗಾಳಕೊಲ್ಲಿಯಲ್ಲಿ(Bay of Bengal) ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಭಾರತೀಯ ಹವಾಮಾನ ಇಲಾಖೆ(Indian Metrological Department)ಯ ಮುನ್ಸೂಚನೆಯಂತೆ ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ(Karnataka Rains) ಸಾಧ್ಯತೆ ಇದೆ.
ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ, ರಾಜ್ಯದ 21 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ರಾಮನಗರ, ಚಾಮರಾಜನಗರ, ಚಿತ್ರದುರ್ಗದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ಇದೆ.
ಸಿಲಿಕಾನ್ ಸಿಟಿಯಲ್ಲಿ ಬೆಳಗ್ಗೆಯಿಂದಲೇ ಜಿಟಿ ಜಿಟಿ ಮಳೆ ಆರಂಭವಾಗಿದೆ. ಮೋಡ ಕವಿದ ವಾತಾವರಣವಿದ್ದು, “ಮುಂದಿನ 5 ದಿನಗಳ ಕಾಲ ಇದೇ ರೀತಿ ವಾತಾವರಣ ಇರಲಿದೆ” ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.