ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಮತ್ತೆ ವಿಘ್ನ ಶುರುವಾಗಿದೆ. ಸದ್ಯದ ಸ್ಥಿತಿ ಗಮನಿಸಿದರೆ 2026ರ ವರೆಗೆ ಚುನಾವಣೆ ನಡೆಯುವುದು ಅನುಮಾನ ಎನ್ನಲಾಗುತ್ತಿದೆ.
ಈ ಬಾರಿ ರಾಜ್ಯ ಬಜೆಟ್ ನಲ್ಲಿ ಗ್ರೇಟರ್ ಬೆಂಗಳೂರು ಅಥಾರಿಟಿ ಷೋಷಣೆ ಮಾಡಲಾಗುತ್ತದೆ. ಒಂದು ವೇಳೆ ಅದು ಘೋಷಣೆಯಾದರೆ ಚುನಾವಣೆ ನಡೆಯುವುದು ಡೌಟ್ ಎನ್ನಲಾಗುತ್ತಿದೆ.
ಗ್ರೇಟರ್ ಬೆಂಗಳೂರು ಅಥಾರಿಟಿ ಜಾರಿ ಅದರೆ ಮತ್ತೆ ವಾರ್ಡ್ ವಿಂಗಣೆಯಾಗಬೇಕು. ಬೆಂಗಳೂರಿಗೆ ಮತ್ತಷ್ಟು ಪ್ರದೇಶಗಳ ಸೇರ್ಪಡೆಯಾಗುತ್ತದೆ. ಹೀಗಾಗಿ ಮತ್ತೆ ಡಿ.ಲಿಮಿಟೇಷನ್ ಮಾಡಬೇಕು. ಗ್ರೇಟರ್ ಬೆಂಗಳೂರು ಅಥಾರಿಟಿಯ ಹೊಸ ಕಾಯ್ದೆ ಜಾರಿಗೆ ತರಬೇಕು. ಇದೆಲ್ಲ ಆಗಬೇಕು ಅಂದರೆ ಸುಮಾರು ಒಂದು ವರ್ಷ ಕಾಯಬೇಕಾಗುತ್ತದೆ.
ಈಗಾಗಲೇ ಕಳೆದ ನಾಲ್ಕು ವರ್ಷಗಳಿಂದಲೂ ಬಿಬಿಎಂಪಿಗೆ ಚುನಾವಣೆ ನಡೆದಿಲ್ಲ. ಚುನಾಯಿತ ಜನಪ್ರತಿನಿಧಿ ಇಲ್ಲದೇ, ಪಾಲಿಕೆಯಲ್ಲಿ ಅಧಿಕಾರಿಗಳದ್ದೇ ದರ್ಬಾರ್ ಎನ್ನುವಂತಾಗಿದೆ. ಈಗ ಚುನಾವಣೆ ಮತ್ತಷ್ಟು ಕಗ್ಗಂಟಾಗಿದ್ದು, ಈ ವರ್ಷ ಚುನಾವಣೆ ನಡೆಯುವುದು ಡೌಟ್ ಎಂದು ತಜ್ಞರು ಅಭಿಪ್ರಾಯ ಪಡುತ್ತಿದ್ದಾರೆ.