ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಸ್ಥಳೀಯ ಸಂಸ್ಥೆಯಿಂದ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಅಡಿಪಾಯ ಹಾಕಲಾಗುತ್ತಿದೆ.
ಇತಿಹಾಸದಲ್ಲೇ ಇದೆ ಮೊದಲ ಬಾರಿಗೆ ಬಿಬಿಎಂಪಿ ಮೆಡಿಕಲ್ ಕಾಲೇಜು ನಿರ್ಮಿಸಲು ಮುಂದಾಗಿದೆ. ಕಾಲೇಜು ನಿರ್ಮಾಣದ ವಿಷಯವನ್ನು ಈ ಬಾರಿಯ ಬಜೆಟ್ ನಲ್ಲಿ ಪ್ರಸ್ತಾಪಿಸಲಾಗಿದೆ. ಈಗಾಗಲೇ ಪಾಲಿಕೆ ವ್ಯಾಪ್ತಿಯಲ್ಲಿ ಶಾಲಾ-ಕಾಲೇಜುಗಳನ್ನು ನಡೆಸಲಾಗುತ್ತಿದೆ. ಈ ಸಾಲಿಗೆ ಮೆಡಿಕಲ್ ಕಾಲೇಜು ಸೇರಿಸಲು ಪಾಲಿಕೆ ನಿರ್ಧರಿಸಿದೆ.
2024-35ರ ಬಜೆಟ್ ನಲ್ಲಿ ಪಾಲಿಕೆಯು ತನ್ನ ಬಜೆಟ್ ನಲ್ಲಿ 500 ಕೋಟಿ ರೂ. ಮೀಸಲಿಟ್ಟಿದೆ. ಆದರೆ, ಅನುದಾನ ಕೊರತೆಯಿಂದ ಅದು ಜಾರಿಯಾಗಿಲ್ಲ. ಈ ಬಾರಿಯ ಬಜೆಟ್ ನಲ್ಲಿ ಮತ್ತೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಗೋವಿಂದರಾಜನಗರ ವಿಧಾನಸಭ ಕ್ಷೇತ್ರದಲ್ಲಿ ವೈದ್ಯಕೀಯ ವಿದ್ಯಾಲಯ ಸ್ಥಾಪನೆಗೆ ಪಾಲಿಕೆ ಮುಂದಾಗಿದೆ.
ವೈದ್ಯಕೀಯ ನಿಯಮದಂತೆ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ 500 ಬೆಡ್ ಗಳು ಇರಬೇಕು. ಈಗಾಗಲೇ ಎಂಸಿ ಲೇಔಟ್ ಪಾಲಿಕೆ ಆಸ್ಪತ್ರೆಯಲ್ಲಿ 300 ಬೆಡ್ ಗಳ ಹಾಸಿಗೆ ಇದೆ. ಇದಕ್ಕೆ ಹೈಟೆಕ್ ಸ್ಪರ್ಶ ನೀಡಿ, ಬೆಡ್ ಗಳನ್ನು ಹೆಚ್ಚಿಸಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಮುಂದಾಗಲಾಗಿದೆ. ಸರ್ಕಾರ ಅನುದಾನದ ಗ್ರೀನ್ ಸಿಗ್ನಲ್ ನೀಡಿದರೆ, ಪಾಲಿಕೆಯ ವ್ಯಾಪ್ತಿಯಲ್ಲಿ ಮೆಡಿಕಲ್ ಕಾಲೇಜು ಆರಂಭವಾಗುವುದು ಶತಸಿದ್ಧ ಎನ್ನಲಾಗುತ್ತಿದೆ.