ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರಣಾಂತಿಕ ಹಲ್ಲೆಗೆ ಒಳಗಾಗಿದ್ದ ಬಿಬಿಎಂಪಿ ಲಾರಿ ಚಾಲಕ ಸಾವನ್ನಪ್ಪಿದ್ದಾರೆ.
ಲಾರಿ ಚಾಲಕ ಕೊಂಡಯ್ಯ ಸಾವನ್ನಪ್ಪಿದ್ದಾರೆ. ಮಾರ್ಚ್ 29ರಂದು ಥಣಿಸಂದ್ರದ ಹೆಗಡೆ ನಗರದ ಹತ್ತಿರ ಬಿಬಿಎಂಪಿ ಲಾರಿ ಅಪಘಾತ ನಡೆದಿತ್ತು. ಲಾರಿ, ಬೈಕ್ ಗೆ ಗುದ್ದಿದ್ದ ಪರಿಣಾಮ 10 ವರ್ಷದ ಬಾಲಕ ಸಾವನ್ನಪ್ಪಿದ್ದ. ಬೈಕ್ ನಲ್ಲಿದ್ದ ಬಾಲಕನ ತಂದೆ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದರು. ಆದರೆ, ಬಾಲಕ ಸಾವನ್ನಪ್ಪಿದ್ದ.
ಘಟನೆ ನಡೆಯುತ್ತಿದ್ದಂತೆ ಚಾಲಕ ಕೊಂಡಯ್ಯನನ್ನ ಹಿಡಿದು ಸ್ಥಳೀಯರು ಥಳಿಸಿದ್ದರು. ಹೀಗಾಗಿ ಕೊಂಡಯ್ಯ ಗಂಭೀರವಾಗಿ ಗಾಯಗೊಂಡಿದ್ದ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಸ್ಥಳೀಯರು ಮನಸೋ ಇಚ್ಛೆ ಥಳಿಸಿದ್ದರಿಂದಾಗಿ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿತ್ತು ಎನ್ನಲಾಗಿದೆ. ಲಾರಿ ಚಾಲಕನಿಗೆ ಥಳಿಸಿದ ಸಂಬಂಧ ನಾಲ್ವರನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದರು. ಈಗ ಕೊಂಡಯ್ಯ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಬಂಧಿತರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಕುರಿತು ಈಶಾನ್ಯ ವಿಭಾಗದ ಡಿಸಿಪಿ ಸಜೀತ್ ಮಾತನಾಡಿದ್ದು, ಅಪಘಾತ ಪ್ರಕರಣದಲ್ಲಿ ಒಂಭತ್ತು ವರ್ಷದ ಬಾಲಕ ಸಾವನ್ನಪ್ಪಿದ್ದ. ಆ ವೇಳೆ ಅಲ್ಲಿನ ಸ್ಥಳೀಯರು ರೊಚ್ಚಿಗೆದ್ದು ಚಾಲಕನ ಮೇಲೆ ಹಲ್ಲೆ ನಡೆಸಿದ್ದರು. ಹೀಗಾಗಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಚಾಲಕ ಕೊಂಡಯ್ಯ ಆಂಧ್ರ ಮೂಲದವರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಅಂದು ಘಟನೆ ಸಂದರ್ಭದಲ್ಲಿ ಹಲ್ಲೆ ಮಾಡಿದವರು ಯಾರಾದರೂ ಉಳಿದಿದ್ದರೆ ಅವರನ್ನು ಕೂಡ ಪತ್ತೆ ಹಚ್ಚಿ ಅರೆಸ್ಟ್ ಮಾಡಲಾಗುವುದು ಎಂದು ಹೇಳಿದ್ದಾರೆ.



















