ಬೆಂಗಳೂರು: ಡಿಕೆಶಿ ವೈಟ್ ಟ್ಯಾಪಿಂಗ್ ರಸ್ತೆ ಪರಿಶೀಲನೆ ನಡೆಸಿದ ಬೆನ್ನಲ್ಲೇ ಬಿಬಿಎಂಪಿ ಆಯುಕ್ತರು ಎಚ್ಚೆತ್ತುಕೊಂಡಿದ್ದಾರೆ.
ಕಳೆದ ವಾರ ಡಿಸಿಎಂ ಡಿ.ಕೆ. ಶಿವಕುಮಾರ್ ನಗರ ಪ್ರದಕ್ಷಿಣೆ ಮಾಡಿದ್ದರು. ನಾಗರಭಾವಿಯಲ್ಲಿ ವೈಟ್ ಟ್ಯಾಪಿಂಗ್ ರಸ್ತೆ ಕಾಮಗಾರಿ ವೀಕ್ಷಣೆ ನಡೆಸಿದ್ದರು. ವೀಕ್ಷಣೆ ವೇಳೆ ವೈಟ್ ಟ್ಯಾಪಿಂಗ್ ರಸ್ತೆಯ ಕಾಂಕ್ರೀಟ್ ಬಳಕೆಯಲ್ಲಿ ವ್ಯತ್ಯಾಸ ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ 150 ಕಿ.ಮೀ ಉದ್ದ 97 ರಸ್ತೆಗಳ ವೈಟ್ ಟ್ಯಾಪಿಂಗ್ ಕಾಮಗಾರಿಯ ಗುಣಮಟ್ಟ ಪರೀಕ್ಷೆ ನಡೆಸುವಂತೆ ಸೂಚಿಸಿದ್ದರು.
ನಗರದ ಎಲ್ಲಾ ವೈಟ್ ಟ್ಯಾಪಿಂಗ್ ರಸ್ತೆಗಳ ಗುಣಮಟ್ಟದ ಪರೀಕ್ಷೆ ನಡೆಸಿ ವರದಿ ನೀಡುವಂತೆ ವಿಶೇಷ ಅಯುಕ್ತರಿಗೆ ಸೂಚಿಸಿದ್ದರು. ಹೀಗಾಗಿ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಗೆ ವೈಟ್ ಟ್ಯಾಪಿಂಗ್ ರಸ್ತೆ ಟೆಸ್ಟಿಂಗ್ ಗೆ ನೇಮಕ ಮಾಡಿದ್ದಾರೆ.