ನವದೆಹಲಿ : ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಬಹುನಿರೀಕ್ಷಿತ 19ನೇ ಸೀಸನ್ ಐಪಿಎಲ್(IPL)ನ ಎರಡನೇ ಹಂತದ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಮೂಲಕ ಅಭಿಮಾನಿಗಳಿಗೆ ಎಷ್ಟು ಪಂದ್ಯಗಳು ಮತ್ತು ಯಾವ ನಗರಗಳಲ್ಲಿ ಪಂದ್ಯ ನಡೆಯಲಿವೆ ಎಂಬುದರ ಬಗ್ಗೆ ಈಗ ಸ್ಪಷ್ಟ ಚಿತ್ರಣ ಸಿಕ್ಕಂತಾಗಿದೆ.
ಎರಡನೇ ಹಂತದ ಪಂದ್ಯಗಳ ವೇಳಾಪಟ್ಟಿಯನ್ನು ಐಪಿಎಲ್, ಎಕ್ಸ್ (X) ಮೂಲಕ ಘೋಷಿಸಲಾಗಿದೆ. ದೇಶದ ವಿವಿಧ ಭಾಗಗಳಲ್ಲಿ ಚುನಾವಣೆಗಳು ನಡೆಯುತ್ತಿರುವುದರಿಂದ, ಮಾರ್ಚ್ 11ರಂದು ಬಿಸಿಸಿಐ 19ನೇ ಸೀಸನ್ನ ಮೊದಲ ಹಂತದ ಕೇವಲ 20 ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಿತ್ತು. ಅದರಂತೆ, ಮಾರ್ಚ್ 28ರಿಂದ ಏಪ್ರಿಲ್ 12ರ ನಡುವೆ ಮೊದಲ ಸುತ್ತಿನ ಪಂದ್ಯಗಳನ್ನು ನಡೆಸಲಾಗುವುದು ಎಂದು ನಿರ್ಧರಿಸಲಾಯಿತು. ಆದ್ದರಿಂದ, ಅಭಿಮಾನಿಗಳು ಉಳಿದ ಸೀಸನ್ನ ವೇಳಾಪಟ್ಟಿಗಾಗಿ ಕಾಯುತ್ತಿದ್ದರು. ಇದೀಗ ಅಂತಿಮವಾಗಿ ಕಾಯುವಿಕೆ ಮುಗಿದಿದೆ.
ಲೀಗ್ ಹಂತದಲ್ಲಿ ಉಳಿದಿದ್ದ 50 ಪಂದ್ಯಗಳು ಏಪ್ರಿಲ್ 13ರಿಂದ ಮೇ 24ರವರೆಗೆ ಭಾರತದೆಲ್ಲೆಡೆ 12 ಸ್ಥಳಗಳಲ್ಲಿ ನಡೆಯಲಿವೆ. ಎರಡನೇ ಹಂತದ ಪಂದ್ಯಗಳು ಬೆಂಗಳೂರು, ಮುಂಬೈ, ಚೆನ್ನೈ, ಕೋಲ್ಕತಾ, ದೆಹಲಿ, ಅಹಮದಾಬಾದ್, ಹೈದರಾಬಾದ್, ಲಖನೌ, ಜೈಪುರ, ಧರ್ಮಶಾಲಾ, ರಾಯ್ಪುರ ಹಾಗೂ ನ್ಯೂ ಚಂಡೀಗಢ ನಗರಗಳಲ್ಲಿ ನಡೆಯಲಿವೆ.
ಎರಡನೇ ಹಂತದ ವೇಳಾಪಟ್ಟಿ
21. ಏಪ್ರಿಲ್ 13 (ಸೋಮವಾರ): ರಾಜಸ್ಥಾನ ರಾಯಲ್ಸ್ vs ಸನ್ರೈಸರ್ಸ್ ಹೈದರಾಬಾದ್ – ಹೈದರಾಬಾದ್ (ಸಂಜೆ 7:30)
22. ಏಪ್ರಿಲ್ 14 (ಮಂಗಳವಾರ): ಕೋಲ್ಕತ್ತಾ ನೈಟ್ ರೈಡರ್ಸ್ vs ಚೆನ್ನೈ ಸೂಪರ್ ಕಿಂಗ್ಸ್ – ಚೆನ್ನೈ (ಸಂಜೆ 7:30)
23. ಏಪ್ರಿಲ್ 15 (ಬುಧವಾರ): ಲಕ್ನೋ ಸೂಪರ್ಜೈಂಟ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಬೆಂಗಳೂರು (ಸಂಜೆ 7:30)
24. ಏಪ್ರಿಲ್ 16 (ಗುರುವಾರ): ಪಂಜಾಬ್ ಕಿಂಗ್ಸ್ vs ಮುಂಬೈ ಇಂಡಿಯನ್ಸ್ – ಮುಂಬೈ (ಸಂಜೆ 7:30)
25. ಏಪ್ರಿಲ್ 17 (ಶುಕ್ರವಾರ): ಕೋಲ್ಕತ್ತಾ ನೈಟ್ ರೈಡರ್ಸ್ vs ಗುಜರಾತ್ ಟೈಟಾನ್ಸ್ – ಅಹಮದಾಬಾದ್ (ಸಂಜೆ 7:30)
26. ಏಪ್ರಿಲ್ 18 (ಶನಿವಾರ): ಡೆಲ್ಲಿ ಕ್ಯಾಪಿಟಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಬೆಂಗಳೂರು (ಮಧ್ಯಾಹ್ನ 3:30)
27. ಏಪ್ರಿಲ್ 18 (ಶನಿವಾರ): ಚೆನ್ನೈ ಸೂಪರ್ ಕಿಂಗ್ಸ್ vs ಸನ್ರೈಸರ್ಸ್ ಹೈದರಾಬಾದ್ – ಹೈದರಾಬಾದ್ (ಸಂಜೆ 7:30)
28. ಏಪ್ರಿಲ್ 19 (ಭಾನುವಾರ): ರಾಜಸ್ಥಾನ ರಾಯಲ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ – ಕೋಲ್ಕತ್ತಾ (ಮಧ್ಯಾಹ್ನ 3:30)
29. ಏಪ್ರಿಲ್ 19 (ಭಾನುವಾರ): ಲಕ್ನೋ ಸೂಪರ್ಜೈಂಟ್ಸ್ vs ಪಂಜಾಬ್ ಕಿಂಗ್ಸ್ – ನ್ಯೂ ಚಂಡೀಗಢ (ಸಂಜೆ 7:30)
30. ಏಪ್ರಿಲ್ 20 (ಸೋಮವಾರ): ಮುಂಬೈ ಇಂಡಿಯನ್ಸ್ vs ಗುಜರಾತ್ ಟೈಟಾನ್ಸ್ – ಅಹಮದಾಬಾದ್ (ಸಂಜೆ 7:30)
31. ಏಪ್ರಿಲ್ 21 (ಮಂಗಳವಾರ): ಡೆಲ್ಲಿ ಕ್ಯಾಪಿಟಲ್ಸ್ vs ಸನ್ರೈಸರ್ಸ್ ಹೈದರಾಬಾದ್ – ಹೈದರಾಬಾದ್ (ಸಂಜೆ 7:30)
32. ಏಪ್ರಿಲ್ 22 (ಬುಧವಾರ): ರಾಜಸ್ಥಾನ್ ರಾಯಲ್ಸ್ vs ಲಕ್ನೋ ಸೂಪರ್ಜೈಂಟ್ಸ್ – ಲಕ್ನೋ (ಸಂಜೆ 7:30)
33. ಏಪ್ರಿಲ್ 23 (ಗುರುವಾರ): ಚೆನ್ನೈ ಸೂಪರ್ ಕಿಂಗ್ಸ್ vs ಮುಂಬೈ ಇಂಡಿಯನ್ಸ್ – ಮುಂಬೈ (ಸಂಜೆ 7:30)
34. ಏಪ್ರಿಲ್ 24 (ಶುಕ್ರವಾರ): ಗುಜರಾತ್ ಟೈಟಾನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಬೆಂಗಳೂರು (ಸಂಜೆ 7:30)
35. ಏಪ್ರಿಲ್ 25 (ಶನಿವಾರ): ಪಂಜಾಬ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್ – ಡೆಲ್ಲಿ (ಮಧ್ಯಾಹ್ನ 3:30)
36. ಏಪ್ರಿಲ್ 25 (ಶನಿವಾರ): ಸನ್ ರೈಸರ್ಸ್ ಹೈದರಾಬಾದ್ vs ರಾಜಸ್ಥಾನ್ ರಾಯಲ್ಸ್ – ಜೈಪುರ (ಸಂಜೆ 7:30)
37. ಏಪ್ರಿಲ್ 26 (ಭಾನುವಾರ): ಚೆನ್ನೈ ಸೂಪರ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್ – ಅಹಮದಾಬಾದ್ (ಮಧ್ಯಾಹ್ನ 3:30)
38. ಏಪ್ರಿಲ್ 26 (ಭಾನುವಾರ): ಕೋಲ್ಕತ್ತಾ ನೈಟ್ ರೈಡರ್ಸ್ vs ಲಕ್ನೋ ಸೂಪರ್ ಜೈಂಟ್ಸ್ – ಲಕ್ನೋ (ಸಂಜೆ 7:30)
39. ಏಪ್ರಿಲ್ 27 (ಸೋಮವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ದೆಹಲಿ ಕ್ಯಾಪಿಟಲ್ಸ್ – ದೆಹಲಿ (ಸಂಜೆ 7:30)
40. ಏಪ್ರಿಲ್ 28 (ಮಂಗಳವಾರ): ರಾಜಸ್ಥಾನ ರಾಯಲ್ಸ್ vs ಪಂಜಾಬ್ ಕಿಂಗ್ಸ್ – ನ್ಯೂ ಚಂಡೀಗಢ (ಸಂಜೆ 7:30)
41. ಏಪ್ರಿಲ್ 29 (ಬುಧವಾರ): ಸನ್ರೈಸರ್ಸ್ ಹೈದರಾಬಾದ್ vs ಮುಂಬೈ ಇಂಡಿಯನ್ಸ್ – ಮುಂಬೈ (ಸಂಜೆ 7:30)
42. ಏಪ್ರಿಲ್ 30 (ಗುರುವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಟೈಟಾನ್ಸ್ – ಅಹಮದಾಬಾದ್ (ಸಂಜೆ 7:30)
43. ಮೇ 01 (ಶುಕ್ರವಾರ): ಡೆಲ್ಲಿ ಕ್ಯಾಪಿಟಲ್ಸ್ vs ರಾಜಸ್ಥಾನ್ ರಾಯಲ್ಸ್ – ಜೈಪುರ (ಸಂಜೆ 7:30)
44. ಮೇ 02 (ಶನಿವಾರ): ಮುಂಬೈ ಇಂಡಿಯನ್ಸ್ vs ಚೆನ್ನೈ ಸೂಪರ್ ಕಿಂಗ್ಸ್ – ಚೆನ್ನೈ (ಸಂಜೆ 7:30)
45. ಮೇ 03 (ಭಾನುವಾರ): ಕೋಲ್ಕತ್ತಾ ನೈಟ್ ರೈಡರ್ಸ್ vs ಸನ್ರೈಸರ್ಸ್ ಹೈದರಾಬಾದ್ – ಹೈದರಾಬಾದ್ (ಮಧ್ಯಾಹ್ನ 3:30)
46. ಮೇ 03 (ಭಾನುವಾರ): ಪಂಜಾಬ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್ – ಅಹಮದಾಬಾದ್ (ಸಂಜೆ 7:30)
47. ಮೇ 04 (ಸೋಮವಾರ): ಲಕ್ನೋ ಸೂಪರ್ಜೈಂಟ್ಸ್ vs ಮುಂಬೈ ಇಂಡಿಯನ್ಸ್ – ಮುಂಬೈ (ಸಂಜೆ 7:30)
48. ಮೇ 05 (ಮಂಗಳವಾರ): ಚೆನ್ನೈ ಸೂಪರ್ ಕಿಂಗ್ಸ್ vs ದೆಹಲಿ ಕ್ಯಾಪಿಟಲ್ಸ್ – ದೆಹಲಿ (ಸಂಜೆ 7:30)
49. ಮೇ 06 (ಬುಧವಾರ): ಪಂಜಾಬ್ ಕಿಂಗ್ಸ್ vs ಸನ್ರೈಸರ್ಸ್ ಹೈದರಾಬಾದ್ – ಹೈದರಾಬಾದ್ (ಸಂಜೆ 7:30)
50. ಮೇ 07 (ಗುರುವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಲಕ್ನೋ ಸೂಪರ್ಜೈಂಟ್ಸ್ – ಲಕ್ನೋ (ಸಂಜೆ 7:30)
51. ಮೇ 08 (ಶುಕ್ರವಾರ): ಕೋಲ್ಕತ್ತಾ ನೈಟ್ ರೈಡರ್ಸ್ vs ದೆಹಲಿ ಕ್ಯಾಪಿಟಲ್ಸ್ – ದೆಹಲಿ (ಸಂಜೆ 7:30)
52. ಮೇ 09 (ಶನಿವಾರ): ಗುಜರಾತ್ ಟೈಟಾನ್ಸ್ vs ರಾಜಸ್ಥಾನ್ ರಾಯಲ್ಸ್ – ಜೈಪುರ (ಸಂಜೆ 7:30)
53. ಮೇ 10 (ಭಾನುವಾರ): ಲಕ್ನೋ ಸೂಪರ್ಜೈಂಟ್ಸ್ vs ಚೆನ್ನೈ ಸೂಪರ್ ಕಿಂಗ್ಸ್ – ಚೆನ್ನೈ (ಮಧ್ಯಾಹ್ನ 3:30)
54. ಮೇ 10 (ಭಾನುವಾರ): ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ರಾಯ್ಪುರ (ಸಂಜೆ 7:30)
55. ಮೇ 11 (ಸೋಮವಾರ): ಡೆಲ್ಲಿ ಕ್ಯಾಪಿಟಲ್ಸ್ vs ಪಂಜಾಬ್ ಕಿಂಗ್ಸ್ – ಧರ್ಮಶಾಲಾ (ಸಂಜೆ 7:30)
56. ಮೇ 12 (ಮಂಗಳವಾರ): ಸನ್ರೈಸರ್ಸ್ ಹೈದರಾಬಾದ್ vs ಗುಜರಾತ್ ಟೈಟಾನ್ಸ್ – ಅಹಮದಾಬಾದ್ (ಸಂಜೆ 7:30)
57. ಮೇ 13 (ಬುಧವಾರ): ಕೋಲ್ಕತ್ತಾ ನೈಟ್ ರೈಡರ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ರಾಯ್ಪುರ (ಸಂಜೆ 7:30)
58. ಮೇ 14 (ಗುರುವಾರ): ಮುಂಬೈ ಇಂಡಿಯನ್ಸ್ vs ಪಂಜಾಬ್ ಕಿಂಗ್ಸ್ – ಧರ್ಮಶಾಲಾ (ಸಂಜೆ 7:30)
59. ಮೇ 15 (ಶುಕ್ರವಾರ): ಚೆನ್ನೈ ಸೂಪರ್ ಕಿಂಗ್ಸ್ vs ಲಕ್ನೋ ಸೂಪರ್ ಜೈಂಟ್ಸ್ – ಲಕ್ನೋ (ಸಂಜೆ 7:30)
60. ಮೇ 16 (ಶನಿವಾರ): ಗುಜರಾತ್ ಟೈಟಾನ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ – ಕೋಲ್ಕತ್ತಾ (ಸಂಜೆ 7:30)
61. ಮೇ 17 (ಭಾನುವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್ – ಧರ್ಮಶಾಲಾ (ಮಧ್ಯಾಹ್ನ 3:30)
62. ಮೇ 17 (ಭಾನುವಾರ): ರಾಜಸ್ಥಾನ ರಾಯಲ್ಸ್ vs ದೆಹಲಿ ಕ್ಯಾಪಿಟಲ್ಸ್ – ದೆಹಲಿ (ಸಂಜೆ 7:30)
63. ಮೇ 18 (ಸೋಮವಾರ): ಸನ್ರೈಸರ್ಸ್ ಹೈದರಾಬಾದ್ vs ಚೆನ್ನೈ ಸೂಪರ್ ಕಿಂಗ್ಸ್ – ಚೆನ್ನೈ (ಸಂಜೆ 7:30)
64. ಮೇ 19 (ಮಂಗಳವಾರ): ಲಕ್ನೋ ಸೂಪರ್ಜೈಂಟ್ಸ್ vs ರಾಜಸ್ಥಾನ್ ರಾಯಲ್ಸ್ – ಜೈಪುರ (ಸಂಜೆ 7:30)
65. ಮೇ 20 (ಬುಧವಾರ): ಮುಂಬೈ ಇಂಡಿಯನ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ – ಕೋಲ್ಕತ್ತಾ (ಸಂಜೆ 7:30)
66. ಮೇ 21 (ಗುರುವಾರ): ಗುಜರಾತ್ ಟೈಟಾನ್ಸ್ vs ಚೆನ್ನೈ ಸೂಪರ್ ಕಿಂಗ್ಸ್ – ಚೆನ್ನೈ (ಸಂಜೆ 7:30)
67. ಮೇ 22 (ಶುಕ್ರವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಸನ್ ರೈಸರ್ಸ್ ಹೈದರಾಬಾದ್ – ಹೈದರಾಬಾದ್ (ಸಂಜೆ 7:30)
68. ಮೇ 23 (ಶನಿವಾರ): ಪಂಜಾಬ್ ಕಿಂಗ್ಸ್ vs ಲಕ್ನೋ ಸೂಪರ್ ಜೈಂಟ್ಸ್ – ಲಕ್ನೋ (ಸಂಜೆ 7:30)
69. ಮೇ 24 (ಭಾನುವಾರ): ರಾಜಸ್ಥಾನ ರಾಯಲ್ಸ್ vs ಮುಂಬೈ ಇಂಡಿಯನ್ಸ್ – ಮುಂಬೈ (ಮಧ್ಯಾಹ್ನ 3:30)
70. ಮೇ 24 (ಭಾನುವಾರ): ಡೆಲ್ಲಿ ಕ್ಯಾಪಿಟಲ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ – ಕೋಲ್ಕತ್ತಾ (ಸಂಜೆ 7:30)
ಇದನ್ನೂ ಓದಿ : ರೈಲು ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್.. ಟಿಕೆಟ್ ರದ್ದಾದರೆ ಇನ್ನು ಹಣ ವಾಪಸ್ ಸಿಗಲ್ಲ!



















