ಮುಂಬಯಿ: 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ (Champions Trophy 2025) ಟೂರ್ನಿಗಾಗಿ ಭಾರತ ಕ್ರಿಕೆಟ್ ತಂಡ ಪಾಕ್ ಪ್ರಯಾಣಿಸುವುದಿಲ್ಲ ಎಂದು ಬಿಸಿಸಿಐ ಖಡಕ್ ಆಗಿ ಹೇಳಿದೆ ಎನ್ನಲಾಗಿದೆ.
ಈ ಹಿನ್ನಲೆಯಲ್ಲಿಯೇ ಭಾರತದ ಪಂದ್ಯಗಳನ್ನು ಶ್ರೀಲಂಕಾ ಅಥವಾ ದುಬೈನಲ್ಲಿ ನಡೆಸುವಂತೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ ಕೇಳಿದೆ ಎಂದು ಬಿಸಿಸಿಐ (BCCI) ಮೂಲಗಳು ತಿಳಿಸಿವೆ.
2025ರ ಫೆಬ್ರವರಿ 19ರಿಂದ ಮಾರ್ಚ್ 9ರ ವರೆಗೆ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ (Champions Trophy) ಪಾಕ್ ಆತಿಥ್ಯದಲ್ಲಿ ನಡೆಯಲಿದೆ. ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಯಾದರೆ ಮಾರ್ಚ್ 10 ರಂದು ಮೀಸಲು ದಿನ ಇರಲಿದೆ. ಪಾಕಿಸ್ತಾನದ (Pakistan) ಕರಾಚಿ, ಲಾಹೋರ್, ಮುಲ್ತಾನ್ ಮತ್ತು ರಾವಲ್ಪಿಂಡಿ ಕ್ರೀಡಾಂಗಣಗಳು ಆತಿಥ್ಯ ವಹಿಸಲಿವೆ. ಭಾರತ ಮತ್ತು ಪಾಕ್ ನಡುವಿನ ಪಂದ್ಯ ಲಾಹೋರ್ ನಲ್ಲಿ ನಿಗದಿಯಾಗಿದೆ. ಆದರೆ, ಪಾಕ್ ಗೆ ತೆರಳಲ್ಲ ಎಂದು ಭಾರತ ಹೇಳಿದೆ.

ಭಾರತ ಆಡುವ ಎಲ್ಲ ಪಂದ್ಯಗಳನ್ನು ಒಂದೇ ನಗರದಲ್ಲಿ ಆಡುವಂತೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಭಾರತಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಭಾರತದ ಎಲ್ಲಾ ಪಂದ್ಯಗಳನ್ನು ಲಾಹೋರ್ ಮೈದಾನದಲ್ಲೇ ನಿಗದಿಪಡಿಸಲಾಗಿತ್ತು. ಭಾರತ ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ. ದುಬೈ ಅಥವಾ ಶ್ರೀಲಂಕಾದಲ್ಲಿ ತನ್ನ ಪಂದ್ಯಗಳನ್ನು ಆಯೋಜಿಸುವಂತೆ ಐಸಿಸಿಗೆ ಕೇಳಿಕೊಂಡಿದೆ ಎಂದು ಬಿಸಿಸಿಐ ಖಚಿತಪಡಿಸಿದೆ. ಕಳೆದ ಮೇ ತಿಂಗಳಲ್ಲಿ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ, ಕೇಂದ್ರ ಸರ್ಕಾರ ಅನುಮತಿ ನೀಡಿದರೆ ಭಾರತ ತಂಡ ಪಾಕಿಸ್ತಾನಕ್ಕೆ ತೆರಳಲಿದೆ ಎಂದು ಹೇಳಿದ್ದರು. ಆದರೆ, ಈಗ ಪಾಕಿಸ್ತಾನ್ ಕ್ಕೆ ತೆರಳುವುದಿಲ್ಲ ಎಂದು ಖಡಕ್ ಆಗಿಯೇ ಹೇಳಿದೆ. ಐಸಿಸಿ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುವುದನ್ನು ಕಾಯ್ದು ನೋಡಬೇಕಿದೆ.
