ಬೆಂಗಳೂರು: ಮೆಟ್ರಿಕ್ ನಂತರದ ಒಬಿಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಲಾಗಿದೆ. ಕರ್ನಾಟಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025-26ನೇ ಶೈಕ್ಷಣಿಕ ವರ್ಷಕ್ಕಾಗಿ ಮೆಟ್ರಿಕ್ ನಂತರದ ಹಾಸ್ಟೆಲ್ ಗಳ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪಿಯುಸಿ, ಐಟಿಐ ಹಾಗೂ ಡಿಪ್ಲೋಮಾ ಕೋರ್ಸ್ ಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಹಾಸ್ಟೆಲ್ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕವೇ ಅರ್ಜಿ ಸಲ್ಲಿಸಬಹುದಾಗಿದೆ.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ 20 ಕೊನೆಯ ದಿನವಾಗಿದೆ. ಎಸ್ಸೆಸ್ಸೆಲ್ಸಿ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆದರೆ, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ತಾಂತ್ರಿಕ ದೋಷ ಅಡ್ಡಿಯಾದರೆ, bcwdhelpline@gmail.com ಗೆ ಮೇಲ್ ಮಾಡಬಹುದು. ಇಲ್ಲವೇ, 8050770004 ಮತ್ತು 8050770005 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ. ಜಿಲ್ಲೆ ಅಥವಾ ತಾಲೂಕಿನಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಕಚೇರಿಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹಲವು ದಾಖಲೆಗಳನ್ನು ಸಲ್ಲಿಸಬೇಕು. ಕುಟುಂಬ ಆದಾಯ ಪ್ರಮಾಣಪತ್ರ, ಜಾತಿ ಪ್ರಮಾಣಪತ್ರ, 10ನೇ ತರಗತಿ ಅಂಕಪಟ್ಟಿ, ವಿದ್ಯಾರ್ಥಿಯ ಆಧಾರ್ ಕಾರ್ಡ್ ನಕಲು ಪ್ರತಿ, ಪಾಸ್ ಪೋರ್ಟ್ ಸೈಜಿನ ಫೋಟೋ ಸೇರಿ ಹಲವು ದಾಖಲೆಗಳನ್ನು ಸಲ್ಲಿಸಬೇಕು.
ಅರ್ಜಿಗಳನ್ನು ಪರಿಶೀಲಿಸಿದ ನಂತರ, ಮೆರಿಟ್ ಮತ್ತು ಮೀಸಲಾತಿ ನಿಯಮಗಳ ಆಧಾರದ ಮೇಲೆ ಪ್ರವೇಶ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರು ಇಲಾಖೆಯ https://www.bcwd.karnataka.gov.in/ ವೆಬ್ ಸೈಟ್ ಗೆ ಭೇಟಿ ನೀಡಬಹುದು. ಕೇವಲ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಮಾತ್ರ ಇದು ಅನ್ವಯಿಸುತ್ತದೆ.