ಬೆಂಗಳೂರು: ಕರ್ನಾಟಕ ಸರ್ಕಾರದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ (BDA Recruitment 2025) ಖಾಲಿ ಇರುವ 25 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಫಸ್ಟ್ ಡಿವಿಷನ್ ಕ್ಲರ್ಕ್ (FDA) ಹಾಗೂ ಸೆಕೆಂಡ್ ಡಿವಿಷನ್ ಕ್ಲರ್ಕ್ (SDA) ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವುದು ಹೇಗೆ? ವಿದ್ಯಾರ್ಹತೆ ಏನು ಎಂಬುದು ಸೇರಿ ವಿವಿಧ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಒಟ್ಟು ಹುದ್ದೆ: 25
ಹುದ್ದೆಗಳ ಹೆಸರು: FDA, SDA
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 10
ನೇಮಕಾತಿ ಹೊಂದಿದವರಿಗೆ ಮಾಸಿಕ 34,100 – 83,700 ರೂಪಾಯಿ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಗ್ರಿ, ಬಿ.ಕಾಂ, ಬಿಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ 18ರಿಂದ 38 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. 2 ಎ, 2 ಬಿ, 3 ಎ, 3 ಬಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಎಸ್ಸಿ, ಎಸ್ಟಿಯವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ ಎಂದು ಮಾಹಿತಿ ನೀಡಲಾಗಿದೆ.
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. 2 ಎ, 2 ಬಿ, 3 ಎ, 3 ಬಿ ಅಭ್ಯರ್ಥಿಗಳಿಗೆ 750 ರೂಪಾಯಿ ಅರ್ಜಿ ಶುಲ್ಕವಿದ್ದರೆ, ಎಸ್ಸಿ, ಎಸ್ಟಿ, ಮಾಜಿ ಸೈನಿಕರಿಗೆ 500 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಪಿಡಬ್ಲ್ಯೂಡಿ ವರ್ಗದವರಿಗೆ 250 ರೂ. ಅರ್ಜಿ ಶುಲ್ಕವಿದೆ. ಅರ್ಜಿ ಸಲ್ಲಿಸಲು ಬಯಸುವವರು kbda.karnataka.gov.in ಗೆ ಭೇಟಿ ನೀಡಬಹುದು.
ಇದನ್ನೂ ಓದಿ : ಉಡುಪಿ | ಎಜುಕೇಶನ್ ಟ್ರಸ್ಟ್ ಹೆಸರಿನಲ್ಲಿ ವಂಚನೆ – 12 ಮಂದಿ ವಿರುದ್ಧ ಎಫ್‌ಐಆರ್!



















