ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತ್ ಡೈನಾಮಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 202 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜುಲೈ 17ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಗಸ್ಟ್ 10 ಕೊನೆಯ ದಿನವಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಯಾವುದೇ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ. ಆ ಮೂಲಕ ಕೇಂದ್ರ ಸರ್ಕಾರಿ ಸಂಸ್ಥೆಯಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಬಹುದು.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತ್ ಡೈನಾಮಿಕ್ಸ್ ಲಿಮಿಟೆಡ್
ಒಟ್ಟು ಹುದ್ದೆಗಳು: 202
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಆಗಸ್ಟ್ 10
ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಬಿಸಿಎ, ಬಿ.ಕಾಮ್, ಬಿಎಸ್ಸಿ, ಬಿ.ಟೆಕ್, ಬಿಇ, ಡಿಪ್ಲೋಮಾ, ಎಂಎ, ಎಂಬಿಎ, ಎಂಎಸ್ ಡಬ್ಲ್ಯೂ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುತ್ತದೆ. ಟ್ರೈನಿ ಎಂಜಿನಿಯರ್ ಹಾಗೂ ಟ್ರೈನಿ ಆಫೀಸರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಕನಿಷ್ಠ 28ರಿಂದ 33 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಜನರಲ್, ಒಬಿಸಿಯವರಿಗೆ 300 ರೂಪಾಯಿ ಅರ್ಜಿ ಶುಲ್ಕವಿದೆ. ಎಸ್ಸಿ, ಎಸ್ಟಿ, ಮಹಿಳೆಯರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ 38 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ಸೈಟ್ bdl-india.in ಗೆ ಭೇಟಿ ನೀಡಬೇಕು
ಟ್ರೈನಿ ಎಂಜಿನಿಯರ್, ಟ್ರೈನಿ ಆಫೀಸರ್ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಆನ್ ಲೈನ್ ಮೂಲಕವೇ ಶುಲ್ಕ ಪಾವತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು



















