ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತ್ ಡೈನಾಮಿಕ್ಸ್ ಲಿಮಿಟೆಡ್ ನಲ್ಲಿ (BDL Recruitment 2025) ಖಾಲಿ ಇರುವ 86 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 86 ಹುದ್ದೆಗಳು ಅಪ್ರೆಂಟಿಸ್ ಹುದ್ದೆಗಳಾಗಿದ್ದು, ಈಗಷ್ಟೇ ಕೋರ್ಸ್ ಗಳನ್ನು ಮುಗಿಸಿದವರಿಗೆ ತರಬೇತಿ ಪಡೆಯಲು ಒಳ್ಳೆಯ ಅವಕಾಶವಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತ್ ಡೈನಾಮಿಕ್ಸ್ ಲಿಮಿಟೆಡ್
ಒಟ್ಟು ಹುದ್ದೆಗಳು: 86
ಹುದ್ದೆಗಳ ಹೆಸರು: ಅಪ್ರೆಂಟಿಸ್
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 14
ಉದ್ಯೋಗ ಸ್ಥಳ: ಸಂಗಾರೆಡ್ಡಿ, ತೆಲಂಗಾಣ
ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ಪದವಿ, ಬಿ.ಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದು. ಗ್ರಾಜುಯೇಟ್ ಅಪ್ರೆಂಟಿಸ್ ಹಾಗೂ ಟೆಕ್ನಿಶಿಯನ್ ಅಪ್ರೆಂಟಿಸ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ತರಬೇತಿ ಅವಧಿಯಲ್ಲಿಯೇ ಅಭ್ಯರ್ಥಿಗಳಿಗೆ 8-9 ಸಾವಿರ ರೂಪಾಯಿ ಸ್ಟೈಪೆಂಡ್ ನೀಡಲಾಗುತ್ತದೆ. ಮೆರಿಟ್ ಲಿಸ್ಟ್ ಹಾಗೂ ದಾಖಲೆ ಪರಿಶೀಲನೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ಸೈಟ್ bdl-india.in ಗೆ ಭೇಟಿ ನೀಡಬೇಕು
ಅಪ್ರೆಂಟಿಸ್ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಆನ್ ಲೈನ್ ಮೂಲಕವೇ ಶುಲ್ಕ ಪಾವತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು