ಬೆಂಗಳೂರು: ಇತ್ತೀಚೆಗೆ ರಾಜ್ಯದಲ್ಲಿ ಪುಂಡರ ಹಾವಳಿ ಹೆಚ್ಚಾಗಿದೆ. ಕಾರುಗಳ ಸೈಲೆನ್ಸರ್, ಬಾಡಿ, ಬಣ್ಣ, ಇಂಜಿನ್ಗಳನ್ನು ಬದಲಾಯಿಸಿ, ಕರ್ಕಶ ಶಬ್ದ ಮಾಡುತ್ತ ಓಡಾಟ ನಡೆಸುವವರ ಸಂಖ್ಯೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಅಲರ್ಟ್ ಆಗಿರುವ ಪೊಲೀಸರು ಕೆಲವರಿಗೆ ತಕ್ಕ ಪಾಠ ಕಲಿಸಿದ್ದಾರೆ.
ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕರ್ಕಶ ಶಬ್ದ ಮಾಡುತ್ತಾ ಕಾರ್ ರೇಸ್ ಮಾಡುತ್ತಿದ್ದ ಯುವಕರ ಗುಂಪು ಹಾಗೂ 7 ಕಾರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು ತಡೆದು ಪ್ರಕರಣ ದಾಖಲಿಸಿದ್ದಾರೆ.
ಬಂಧಿತರು ಹೆದ್ದಾರಿಯಲ್ಲಿ ಸಾಗುವ ಇನ್ನಿತರ ವಾಹನಗಳಿಗೆ ಸೈಡ್ ನೀಡದೆ, ಕಿರಿಕಿರಿ ಮಾಡುತ್ತ, ಕರ್ಕಶವಾಗಿ ಸೌಂಡ್ ಮಾಡುತ್ತ ವಾಹನಗಳನ್ನು ಚಲಾಯಿಸುತ್ತಿದ್ದರು. ಹೀಗಾಗಿ ಅಲರ್ಟ್ ಆಗಿದ್ದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಕುರಿತು ಇಂತಹ ಪುಂಡರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಕೂಡ ಚಿಕ್ಕಬಳ್ಳಾಪುರ ಎಸ್ಪಿ ಕುಶಲ್ ಚೌಕ್ಸೆಗೆ ದೂರು ನೀಡಿದ್ದರು. ಹೀಗಾಗಿ ಕಾರ್ ರೇಸ್ ಮಾಡುತ್ತಿದ್ದ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.