ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ಬಾರಿ ಹೆಚ್ಚು ಮಳೆ ಸುರಿದಿದೆ. ಹೀಗಾಗಿ ಜನರು ತತ್ತರಿಸಿ ಹೋಗಿದ್ದಾರೆ. ಈಗ ಮಳೆಯ ಪ್ರಮಾಮ ಕಡಿಮೆಯಾಗಿದ್ದು, ಚಳಿ ಶುರುವಾಗಿದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಚಳಿಯ ಆರ್ಭಟ ಶುರುವಾಗಿದೆ. ಜನ ಗಢಗಢ ನಡುಗುತ್ತಿದ್ದಾರೆ.
ಉತ್ತರ ಕರ್ನಾಟಕದ ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಬಿಜಾಪುರ, ಬಾಗಲಕೋಟೆ, ಗಗದ, ಕೊಪ್ಪಳ , ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಗರಿಷ್ಠ ಉಷ್ಣಾಂಶ ಕಡಿಮೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗಲಿದೆ.
ಆದರೆ, ಈ ಬಾರಿ ಚಳಿ ಹೆಚ್ಚಾಗಿರುತ್ತದೆ ಎಂದು ಹವಾಮಾನ ಇಲಾಖೆ ಹೇಳಿದೆ. ಫೆಸಿಫಿಕ್ ಮಹಾಸಾಗರದಲ್ಲಿ ಮೇಲ್ಮೈ ಉಷ್ಣಾಂಶ ಸಾಮಾನ್ಯ ಮಟ್ಟಕ್ಕಿಂತ ಕಡಿಮೆ ಆಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಡಿಸೆಂಬರ್ ಹಾಗೂ ಜನವರಿಯಲ್ಲಿ ಕನಿಷ್ಠ ಉಷ್ಣಾಂಶ 8 ರಿಂದ 10 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಕೂಡ ಹೆಚ್ಚು ಚಳಿ ಇರಲಿದೆ. ಹೀಗಾಗಿ ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.