ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಮ್ಯಾ ಇತ್ತೀಚೆಗಷ್ಟೇ ಅವರ ಕುಟುಂಬಸ್ಥರಿಗೆ ನ್ಯಾಯ ಸಿಗಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ಕಮೆಂಟ್ ಮಾಡಿದ್ದರು. ಇದಕ್ಕೆ ನಟ ದರ್ಶನ್ ಅಭಿಮಾನಿಗಳು ರಮ್ಯಾ ವಿರುದ್ಧ ಕಿಡಿಕಾರಿ ಕಮೆಂಟ್ ಮಾಡುತ್ತಿದ್ದಾರೆ. ಹೀಗಾಗಿ ದರ್ಶನ್ ಅಭಿಮಾನಿಗಳಿಗೆ ನಟಿ ರಮ್ಯಾ (Ramya Divya Spandana) ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.
‘ಭಾರತದ ಜನಸಾಮಾನ್ಯರಿಗೆ ಸುಪ್ರೀಂ ಕೋರ್ಟ್ ಒಂದು ಭರವಸೆಯ ಬೆಳಕಾಗಿದೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ಭರವಸೆ ಮೂಡಿದೆ’ ಎಂದು ರಮ್ಯಾ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಇದಕ್ಕೆ ಕೋಪಗೊಂಡಿರುವ ದರ್ಶನ್ ಅಭಿಮಾನಿಗಳು, ರಮ್ಯಾ ವಿರುದ್ಧ ಕಮೆಂಟ್ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಮ್ಯಾ ಅವರು ದರ್ಶನ್ ಅಭಿಮಾನಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಎಲ್ಲ ಡಿ ಬಾಸ್ ಅಭಿಮಾನಿಗಳಿಗಳೂ ನನ್ನ ಇನ್ಸ್ಟಾಗ್ರಾಮ್ ಖಾತೆಗೆ ಸ್ವಾಗತ. ರೇಣುಕಾಸ್ವಾಮಿ ಕುಟುಂಬಕ್ಕೆ ಯಾಕೆ ನ್ಯಾಯ ಸಿಗಬೇಕು ಎಂಬುವುದಕ್ಕೆ ನಿಮ್ಮ ಕಮೆಂಟ್ಗಳೇ ಸಾಕ್ಷಿ’ ಎಂದು ರಮ್ಯಾ ಬರೆದುಕೊಂಡಿದ್ದಾರೆ. ಅಲ್ಲದೇ, ಹಿರಿಯ ನಟ ಜಗ್ಗೇಶ್ ಕೂಡ ದರ್ಶನ್ ಅಭಿಮಾನಿಗಳ ವರ್ತನೆಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗಷ್ಟೇ ಸುಪ್ರೀಂ ಕೋರ್ಟ್ನಲ್ಲಿ ದರ್ಶನ್ ಜಾಮೀನು ವಿಚಾರಣೆ ನಡೆದ ನಂತರ ರಮ್ಯಾ ಈ ರೀತಿ ಪೋಸ್ಟ್ ಮಾಡಿದ್ದರು. ಆದರೆ ಬಳಿಕ ಕಮೆಂಟ್ ಆಯ್ಕೆಯನ್ನು ಅವರು ಆಫ್ ಮಾಡಿದ್ದಾರೆ.


















