ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಬ್ರಾಡ್ ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟಂಟ್ಸ್ ಇಂಡಿಯಾ ಲಿಮಿಟೆಡ್ (BECIL Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 18 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ವಾಹನ ಚಾಲಕ, ಡೇಟಾ ಎಂಟ್ರಿ ಆಪರೇಟರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಬ್ರಾಡ್ ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟಂಟ್ಸ್ ಇಂಡಿಯಾ ಲಿಮಿಟೆಡ್ (BECIL)
ಒಟ್ಟು ಹುದ್ದೆಗಳು: 18
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಡಿಸೆಂಬರ್ 7
ಉದ್ಯೋಗ ಸ್ಥಳ: ನವದೆಹಲಿ
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಎಂಎಸ್ಸಿ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. 5 ವಾಹನ ಚಾಲಕ, 10 ಡೇಟಾ ಎಂಟ್ರಿ ಆಫರೇಟರ್, 3 ಮೆಡಿಕಲ್ ಫಿಸಿಸಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 25 ಸಾವಿರ ರೂ.ನಿಂದ 75 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಅರ್ಜಿ ಸಲ್ಲಿಸುವವರು ಮೊದಲಿಗೆ becil.com ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
Broadcast Engineering Consultants India Limited (BECIL), BECIL BHAWAN, C-56/A-17, Sector-62, Noida-201307 (U.P).
ಇದನ್ನೂ ಓದಿ : ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ 46 ಹುದ್ದೆಗಳ ನೇಮಕ : ಹೀಗೆ ಅರ್ಜಿ ಸಲ್ಲಿಸಿ



















