ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಬ್ರಾಡ್ ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟಂಟ್ಸ್ ಇಂಡಿಯಾ ಲಿಮಿಟೆಡ್ (BECIL Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 154 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಜೂನಿಯರ್ ಟೆಕ್ನಿಶಿಯನ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಬ್ರಾಡ್ ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟಂಟ್ಸ್ ಇಂಡಿಯಾ ಲಿಮಿಟೆಡ್ (BECIL)
ಒಟ್ಟು ಹುದ್ದೆಗಳು: 154
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಫೆಬ್ರವರಿ 18
ಉದ್ಯೋಗ ಸ್ಥಳ: ಜಮ್ಮು-ಕಾಶ್ಮೀರ
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಪ್ಲೋಮಾ, ಐಟಿಐ, ಬಿಇ, ಬಿ ಟೆಕ್, ಎಂಇ, ಎಂ ಟೆಕ್, ಎಂಸಿಎ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಜೂನಿಯರ್ ಟೆಕ್ನಿಶಿಯನ್, ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 25 ಸಾವಿರ ರೂ.ನಿಂದ 1 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಅರ್ಜಿ ಸಲ್ಲಿಸುವವರು ಮೊದಲಿಗೆ becil.com ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
BECIL Bhawan, Sector-62, Noida – 201307
ಇದನ್ನೂ ಓದಿ : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ | ಆರೋಗ್ಯ ಸಂಜೀವಿನಿ ಕುರಿತು ಮಹತ್ವದ ಅಪ್ಡೇಟ್ ಇಲ್ಲಿದೆ



















