ಬೆಂಗಳೂರು: ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ದೊರೆತಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತ್ ಎಲೆಕ್ಟ್ರಾನಿಕ್ಸ್ ಎಜುಕೇಷನಲ್ ಇನ್ ಸ್ಟಿಟ್ಯೂಷನ್ಸ್ ನಲ್ಲಿ ಖಾಲಿ ಇರುವ 10 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 10 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತ್ ಎಲೆಕ್ಟ್ರಾನಿಕ್ಸ್ ಎಜುಕೇಷನಲ್ ಇನ್ ಸ್ಟಿಟ್ಯೂಷನ್ಸ್
ಒಟ್ಟು ಹುದ್ದೆಗಳ ಸಂಖ್ಯೆ: 10
ಹುದ್ದೆ ಹೆಸರು: ಟೀಚರ್
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 24
ಸಂಸ್ಕೃತ ಉಪನ್ಯಾಸಕರು, ಇಂಗ್ಲಿಷ್, ಸಮಾಜ ವಿಜ್ಞಾನ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿಗಳನ್ನು ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ, ಬಿಎ ಬಿ.ಎಡ್, ಡಿ.ಎಡ್ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ ಆಯಾ ಹುದ್ದೆಗಳಿಗೆ ಅನುಗುಣವಾಗಿ 37,500 – 69,250 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಆನ್ ಲೈನ್ ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ beei.edu.in ಗೆ ಭೇಟಿ ನೀಡಬೇಕು
ನಿಮ್ಮ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಅರ್ಜಿ ಡೌನ್ ಲೋಡ್ ಮಾಡಿಕೊಳ್ಳಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು



















