ಬೆಂಗಳೂರು: ನೀವು ಎಸ್ಸೆಸ್ಸೆಲ್ಸಿ, ಐಟಿಐ, ಡಿಪ್ಲೋಮಾ ಕೋರ್ಸ್ ಮುಗಿಸಿ ಒಳ್ಳೆಯ ಉದ್ಯೋಗಕ್ಕಾಗಿ ಕಾಯುತ್ತಿದ್ದೀರಾ? ಅದರಲ್ಲೂ, ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಹೌದು, ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 162 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ಹುದ್ದೆಗಳು: 162
ಹುದ್ದೆ ಹೆಸರು: ಟೆಕ್ನಿಶಿಯನ್, ಎಂಜಿನಿಯರಿಂಗ್ ಅಸಿಸ್ಟಂಟ್ ಟ್ರೈನಿ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 14
162 ಹುದ್ದೆಗಳ ಪೈಕಿ 82 ಟೆಕ್ನಿಶಿಯನ್ ಹಾಗೂ 80 ಎಂಜಿನಿಯರಿಂಗ್ ಅಸಿಸ್ಟಂಟ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಎಸ್ಸೆಸ್ಸೆಲ್ಸಿ, ಐಟಿಐ ಹಾಗೂ ಡಿಪ್ಲೋಮಾ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕನಿಷ್ಠ 18ರಿಂದ ಗರಿಷ್ಠ 28 ವರ್ಷದ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 90 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಒಬಿಸಿ ಸಮುದಾಯದವರಿಗೆ 3 ವರ್ಷ, ಎಸ್ಸಿ, ಎಸ್ಟಿಯವರಿಗೆ 5 ವರ್ಷ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದವರಿಗೆ 590 ರೂಪಾಯಿ ನಿಗದಿಪಡಿಸಲಾಗಿದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆ, ಡಾಕ್ಯುಮೆಂಟ್ ವೇರಿಫಿಕೇಶನ್ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರು bel-india.inಗೆ ಭೇಟಿ ನೀಡಬಹುದು.
ಇದನ್ನೂ ಓದಿ : ಕೇಂದ್ರ ಸರ್ಕಾರದ BEMLನಲ್ಲಿ 100 ಹುದ್ದೆಗಳ ನೇಮಕಾತಿ: 43 ಸಾವಿರ ರೂ. ಸಂಬಳ



















