ಬೆಂಗಳೂರು: ನೀವು ಬಿಎಸ್ಸಿ, ಬಿಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿದ್ದೀರಾ? ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಶುಭ ಸಮಾಚಾರ ಇಲ್ಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ (BEL Recruitment 2025) ಖಾಲಿ ಇರುವ 52 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ಹುದ್ದೆಗಳು: 52
ಹುದ್ದೆ ಹೆಸರು: ಪ್ರಾಜೆಕ್ಟ್ ಎಂಜಿನಿಯರ್-I
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಸಂದರ್ಶನದ ದಿನಾಂಕ: ನವೆಂಬರ್ 20
ಉದ್ಯೋಗ ಸ್ಥಳ: ದೇಶಾದ್ಯಂತ
ಪ್ರಾಜೆಕ್ಟ್ ಎಂಜಿನಿಯರ್- I ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಬಿಎಸ್ಸಿ, ಬಿಇ, ಬಿಟೆಕ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ನೇಮಕಾತಿ ಹೊಂದಿದವರಿಗೆ ಮಾಸಿಕ 40 ಸಾವಿರ ರೂಪಾಯಿಯಿಂದ 55 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅಭ್ಯರ್ಥಿಗಳು ನವೆಂಬರ್ 20ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು. ಇದಾದ ಬಳಿಕ ನವೆಂಬರ್ 24ರಂದು ಸಂದರ್ಶನ ನಡೆಸಲಾಗುತ್ತದೆ.
ಗರಿಷ್ಠ 32 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅವಕಾಶವಿದೆ. ಒಬಿಸಿ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ವಿನಾಯಿತಿ ಇದೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇದೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಹ ಹಾಗೂ ಆಸಕ್ತರು bel-india.in ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ : ರಾಯಚೂರಲ್ಲಿ ವಿಚಾರಣೆಗೆ ಬಂದ ಪೊಲೀಸರನ್ನೇ ಕಂಬಕ್ಕೆ ಕಟ್ಟಿ ಥಳಿಸಿದ ದಂಪತಿ!



















