ಬೆಂಗಳೂರು: ನೀವು ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಶುಭ ಸಮಾಚಾರ ಇಲ್ಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ (BEL Recruitment 2026) ಖಾಲಿ ಇರುವ 2 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ಹುದ್ದೆಗಳು: 2
ಹುದ್ದೆ ಹೆಸರು: ಡೆಪ್ಯೂಟಿ ಮ್ಯಾನೇಜರ್
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಸಂದರ್ಶನದ ದಿನಾಂಕ: ಫೆಬ್ರವರಿ 8
ಉದ್ಯೋಗ ಸ್ಥಳ: ಬೆಂಗಳೂರು
ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಬಿಇ, ಬಿಟೆಕ್, ಎಂಇ, ಎಂಟೆಕ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸುವವರಿಗೆ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 60 ಸಾವಿರ ರೂಪಾಯಿಯಿಂದ 1.8 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಜನರಲ್, ಒಬಿಸಿ ಸಮುದಾಯದವರಿಗೆ 600 ರೂಪಾಯಿ ಅರ್ಜಿ ಶುಲ್ಕವಿದ್ದರೆ, ಉಳಿದವರಿಗೆ ವಿನಾಯಿತಿ ನೀಡಲಾಗಿದೆ.
ಒಬಿಸಿ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ವಿನಾಯಿತಿ ಇದೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇದೆ. ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಹ ಹಾಗೂ ಆಸಕ್ತರು bel-india.in ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಕೇಂದ್ರ ಕೃಷಿ ಸಚಿವಾಲಯದಲ್ಲಿ 13 ಹುದ್ದೆಗಳ ನೇಮಕಾತಿ | ತಿಂಗಳಿಗೆ 2.15 ಲಕ್ಷ ರೂ. ಭರ್ಜರಿ ಸ್ಯಾಲರಿ


















