ಬೆಂಗಳೂರು : ನೀವೇನಾದರೂ ಎಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಕೋರ್ಸ್ ಮುಗಿಸಿ ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಪ್ರಯತ್ನಿಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ (BEL Recruitment 2026) ಖಾಲಿ ಇರುವ 36 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 36 ಅಸಿಸ್ಟಂಟ್ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
ಒಟ್ಟು ಹುದ್ದೆಗಳು: 36
ಹುದ್ದೆಗಳ ಹೆಸರು: ಅಸಿಸ್ಟಂಟ್ ಎಂಜಿನಿಯರ್
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 16
ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 30 ಸಾವಿರ ರೂಪಾಯಿಯಿಂದ 1.2 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ bel-india.in ಗೆ ಭೇಟಿ ನೀಡಬೇಕು.
ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಬೇಕು.
ಅರ್ಜಿಯ ಪ್ರಿಂಟೌಟ್ ತೆಗದುಕೊಂಡು ಭರ್ತಿ ಮಾಡಬೇಕು
ಅರ್ಜಿಯ ಜತೆಗೆ ಅಗತ್ಯ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
The Deputy General Manager (HR & Administration), Bharat Electronics Limited, Ghaziabad.
ಇದನ್ನೂ ಓದಿ : 2027ರ ವಿಶ್ವಕಪ್‌ಗೆ ಬೌಲಿಂಗ್ ಬಳಗದ ಪರೀಕ್ಷೆ : ವಿಂಡೀಸ್ ವಿರುದ್ಧದ ಸರಣಿಯಲ್ಲಿ ಮೊರ್ಕೆಲ್‌ಗೆ ಮಹತ್ವದ ಹೊಣೆ!



















