ಬೆಂಗಳೂರು : ನೀವು ಎಸ್ಸೆಸ್ಸೆಲ್ಸಿ, ಪದವಿ, ಬಿಇ, ಬಿಎಸ್ಸಿ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿದ್ದೀರಾ? ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ (BEL Recruitment 2026) ಖಾಲಿ ಇರುವ 19 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಸಿಸ್ಟಂಟ್ ಎಂಜಿನಿಯರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ಹುದ್ದೆಗಳು: 19
ಹುದ್ದೆ ಹೆಸರು: ಅಸಿಸ್ಟಂಟ್ ಎಂಜಿನಿಯರ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಸಂದರ್ಶನದ ದಿನಾಂಕ: ಮಾರ್ಚ್ 17
ಉದ್ಯೋಗ ಸ್ಥಳ: ಮಹಾರಾಷ್ಟ್ರೇ ಸೇರಿ ದೇಶದ ಹಲವೆಡೆ
ಉತ್ತರ ಪ್ರದೇಶದ ಘಾಜಿಯಾಬಾದ್, ರಾಜಸ್ಥಾನದ ಜೋಧ್ ಪುರ, ಪಂಜಾಬ್ ನ ಬಠಿಂಡಾ, ಮಹಾರಾಷ್ಟ್ರದ ಮುಂಬೈ ಸೇರಿ ದೇಶದ ಹಲವೆಡೆ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ಸೀನಿಯರ್ ಅಸಿಸ್ಟಂಟ್ ಎಂಜಿನಿಯರ್, ಡ್ರೈವರ್, ಹವಿಲ್ದಾರ್, ಜೂನಿಯರ್ ಅಸಿಸ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಪದವಿ, ಬಿಬಿಎ, ಬಿಇ, ಬಿಟೆಕ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1.2 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಒಬಿಸಿ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ವಿನಾಯಿತಿ ಇದೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಬಳಿಕ ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಹ ಹಾಗೂ ಆಸಕ್ತರು bel-india.in ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ : ಮಲ್ಲಿಕಾರ್ಜುನ ಮುತ್ಯಾ ಕೇಸ್‌ಗೆ ರಾಜ್ಯ ಮಹಿಳಾ ಆಯೋಗ ಎಂಟ್ರಿ | ಕಠಿಣ ಕ್ರಮಕ್ಕೆ ಸೂಚನೆ!



















