ಬೆಂಗಳೂರು : ನೀವೇನಾದರೂ ಬಿ.ಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿ ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಪ್ರಯತ್ನಿಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ 56 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 56 ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
ಒಟ್ಟು ಹುದ್ದೆಗಳು: 56
ಹುದ್ದೆಗಳ ಹೆಸರು: ಎಂಜಿನಿಯರ್
ಉದ್ಯೋಗ ಸ್ಥಳ: ನವದೆಹಲಿ ಸೇರಿ ದೇಶದ ಹಲವೆಡೆ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜೂನ್ 8
25 ಫೀಲ್ಡ್ ಆಪರೇಷನ್ ಎಂಜಿನಿಯರ್, 31 ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಪಂಜಾಬ್, ಉತ್ತರ ಪ್ರದೇಶ, ಮಧ್ಯಪ್ರದೇಶ ಹಾಗೂ ನವದೆಹಲಿಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಬಿ.ಇ, ಬಿ.ಟೆಕ್, ಬಿಎಸ್ಸಿ, ಎಂ.ಇ, ಎಂ.ಟೆಕ್ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 60 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ bel-india.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಬೇಕು
ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
ಅರ್ಜಿ ಸಲ್ಲಿಸಿ, ನಮೂನೆಯ ಪ್ರಿಂಟೌಟ್ ತೆಗೆದುಕೊಂಡಿರಬೇಕು
ಇದನ್ನೂ ಓದಿ : ದೇಶದ ವಾಯುಪಡೆಯಲ್ಲಿ 379 ಹುದ್ದೆಗಳ ನೇಮಕಾತಿ : 1.77 ಲಕ್ಷ ರೂಪಾಯಿ ಸಂಬಳ



















