ಬೆಂಗಳೂರು: ನೀವು ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ (BEL Recruitment 2026) ಖಾಲಿ ಇರುವ 84 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ, ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ಹುದ್ದೆಗಳು: 84
ಹುದ್ದೆ ಹೆಸರು: ಗ್ರ್ಯಾಜುಯೇಟ್ ಮತ್ತು ಟೆಕ್ನಿಶಿಯನ್ ಅಪ್ರೆಂಟಿಸ್
ನೇಮಕಾತಿ ವಿಧಾನ: ಸಂದರ್ಶನ
ಸಂದರ್ಶನದ ದಿನಾಂಕ: ಫೆಬ್ರವರಿ 7
ಉದ್ಯೋಗ ಸ್ಥಳ: ಚೆನ್ನೈ
64 ಗ್ರ್ಯಾಜುಯೇಟ್ ಅಪ್ರೆಂಟಿಸ್, 10 ಟೆಕ್ನಿಶಿಯನ್ (ಡಿಪ್ಲೋಮಾ) ಅಪ್ರೆಂಟಿಸ್ ಹಾಗೂ 10 ಆಪ್ಶನಲ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಬಿಇ, ಬಿಟೆಕ್, ಬಿಎಸ್ಸಿ, ಬಿಬಿಎ, ಬಿಬಿಎಂ ಕೋರ್ಸ್ ಗಳನ್ನು ಮುಗಿಸಿದವರು ಸಂದರ್ಶನಕ್ಕೆ ಹಾಜರಾಗಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸುವವರಿಗೆ 25 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 17,500 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಒಬಿಸಿ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ವಿನಾಯಿತಿ ಇದೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇದೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಹ ಹಾಗೂ ಆಸಕ್ತರು ಹೆಚ್ಚಿನ ಮಾಹಿತಿಗೆ bel-india.in ವೆಬ್ ಸೈಟ್ ಗೆ ಭೇಟಿ ನೀಡಬಹುದು. ಸಂದರ್ಶನ ನಡೆಯುವ ಸ್ಥಳ: Bharat Electronics Limited Nandambakkam Chennai – 600089.
ಇದನ್ನೂ ಓದಿ: ಕೇಂದ್ರ ಸರ್ಕಾರದ NALನಲ್ಲಿ 35 ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ



















