ಬೆಂಗಳೂರು : ನೀವು ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಶುಭ ಸಮಾಚಾರ ಇಲ್ಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನಲ್ಲಿ (BEL Recruitment 2026) ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ವಿವಿಧ ಮ್ಯಾನೇಜ್ ಮೆಂಟ್ ಇಂಡಸ್ಟ್ರಿಯಲ್ ಟ್ರೈನಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ಹುದ್ದೆಗಳು: ವಿವಿಧ
ಹುದ್ದೆ ಹೆಸರು: ಮ್ಯಾನೇಜ್ ಮೆಂಟ್ ಇಂಡಸ್ಟ್ರಿಯಲ್ ಟ್ರೈನಿ
ನೇಮಕಾತಿ ವಿಧಾನ: ಸಂದರ್ಶನ
ಸಂದರ್ಶನದ ದಿನಾಂಕ: ಏಪ್ರಿಲ್ 27
ಉದ್ಯೋಗ ಸ್ಥಳ: ಬೆಂಗಳೂರು
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಬಿ.ಕಾಂ, ಬಿಬಿಎ ಸೇರಿ ಯಾವುದೇ ಸಿಎ, ಸಿಎಂಎ ಕೋರ್ಸ್ ಮುಗಿಸಿದವರು ಸಂದರ್ಶನಕ್ಕೆ ಹಾಜರಾಗಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸುವವರಿಗೆ 25 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 30 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಒಬಿಸಿ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ವಿನಾಯಿತಿ ಇದೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇದೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಹ ಹಾಗೂ ಆಸಕ್ತರು ಹೆಚ್ಚಿನ ಮಾಹಿತಿಗೆ bel-india.in ವೆಬ್ ಸೈಟ್ ಗೆ ಭೇಟಿ ನೀಡಬಹುದು. ಸಂದರ್ಶನ ನಡೆಯುವ ಸ್ಥಳ- Center for Learning and Development Bharat Electronics Limited Jalahalli, Bangalore-560090.
ಇದನ್ನೂ ಓದಿ : ಗುಜರಾತ್ ಟೈಟಾನ್ಸ್ ಪಾಲಿಗೆ ‘ಯಮಪಾಶ’ವಾದ ಜಸ್ಪ್ರೀತ್ ಬುಮ್ರಾ!



















