ಬೆಂಗಳೂರು: ನೀವು ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ (BEL Recruitment 2026) ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ, ನೇರ ಸಂದರ್ಶನದ ಮೂಲಕ ನಾನ್-ಎಂಜಿನಿಯರಿಂಗ್ ಗ್ರಾಜ್ಯುಯೇಟ್ ಅಪ್ರೆಂಟಿಸ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ಹುದ್ದೆಗಳು: ವಿವಿಧ
ಹುದ್ದೆ ಹೆಸರು: ನಾನ್-ಎಂಜಿನಿಯರಿಂಗ್ ಗ್ರಾಜ್ಯುಯೇಟ್ ಅಪ್ರೆಂಟಿಸ್
ನೇಮಕಾತಿ ವಿಧಾನ: ಸಂದರ್ಶನ
ಸಂದರ್ಶನದ ದಿನಾಂಕ: ಏಪ್ರಿಲ್ 10
ಉದ್ಯೋಗ ಸ್ಥಳ: ಬೆಂಗಳೂರು
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಬಿ.ಕಾಂ, ಬಿಬಿಎ ಸೇರಿ ಯಾವುದೇ ಪದವಿ ಪಡೆದವರು ಸಂದರ್ಶನಕ್ಕೆ ಹಾಜರಾಗಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸುವವರಿಗೆ 25 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 12,500 ರೂಪಾಯಿ ಸ್ಟೈಪೆಂಡ್ ನೀಡಲಾಗುತ್ತದೆ.
ಒಬಿಸಿ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ವಿನಾಯಿತಿ ಇದೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇದೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಹ ಹಾಗೂ ಆಸಕ್ತರು ಹೆಚ್ಚಿನ ಮಾಹಿತಿಗೆ bel-india.in ವೆಬ್ ಸೈಟ್ ಗೆ ಭೇಟಿ ನೀಡಬಹುದು. ಸಂದರ್ಶನ ನಡೆಯುವ ಸ್ಥಳ- ಕಲಿಕೆ ಮತ್ತು ಅಭಿವೃದ್ಧಿ ಕೇಂದ್ರ (CLD), ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL), ಜಾಲಹಳ್ಳಿ ಪೋಸ್ಟ್, ಬೆಂಗಳೂರು – 560013.
ಇದನ್ನೂ ಓದಿ: ಒಂದು ಕಂಪನಿಯ ಕೆಲಸ ಬಿಟ್ಟ ಬಳಿಕ ಈ ಕೆಲಸ ಮಾಡದಿದ್ದರೆ ಪಿಎಫ್, ಪಿಂಚಣಿಗೆ ಕುತ್ತು



















