ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ಸಂಸ್ಥೆಯಲ್ಲಿ ಖಾಲಿ ಇರುವ 14 ಸೀನಿಯರ್ ಎಂಜಿನಿಯರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಕೊಚ್ಚಿಯಲ್ಲಿರುವ ಘಟಕದಲ್ಲಿ ಕಾರ್ಯನಿರ್ವಹಿಸಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜೂನ್ 16 ಕೊನೆಯ ದಿನವಾಗಿದೆ.
ನೇಮಕಾತಿ ಹೊಂದಿದವರನ್ನು ಮೊದಲಿಗೆ ಕೊಚ್ಚಿಯಲ್ಲಿ ನಿಯೋಜನೆ ಮಾಡಲಾಗುತ್ತದೆ. ಬಳಿಕ ಬೇರೆ ಘಟಕಗಳಿಗೂ ಕಳುಹಿಸಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಸೀನಿಯರ್ ಎಂಜಿನಿಯರ್ (ಇ-33 ಗ್ರೇಡ್) ಹುದ್ದೆಗಳಿಗೆ ಮಾತ್ರ ಈಗ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಎಸ್ಸಿ, ಎಸ್ಟಿ, ಒಬಿಸಿ, ಇಡಬ್ಲ್ಯೂಎಸ್ ವರ್ಗಗಳಿಗೆ ಹುದ್ದೆಗಳನ್ನು ಮೀಸಲಿರಿಸಲಾಗಿದೆ.
ಬಿ.ಇ, ಬಿ.ಟೆಕ್, ಎಂ.ಇ, ಎಂ.ಟೆಕ್ ಕೋರ್ಸ್ ಗಳನ್ನು ಪ್ರಥಮ ದರ್ಜೆಯಲ್ಲಿ ಮುಗಿಸಿರಬೇಕು. 35 ವರ್ಷದೊಳಗಿನವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಒಬಿಸಿಯವರಿಗೆ ಮೂರು ವರ್ಷ, ಎಸ್ಸಿ, ಎಸ್ಟಿಯವರಿಗೆ ಐದು ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇದೆ. ಎಲೆಕ್ಟ್ರಾನಿಕ್ಸ್ ಸಿಸ್ಟಮ್ ಡಿಸೈನ್, ಫರ್ಮ್ ವೇರ್ ಟೆಸ್ಟಿಂಗ್ ಸೇರಿ ಹಲವು ಜವಾಬ್ದಾರಿಗಳನ್ನು ನಿಭಾಯಿಸಬೇಕಾಗುತ್ತದೆ.
https://govtjobsalert.in/wp-content/uploads/2025/05/BEL-Senior-Engineer-Recruitment-2025-Application-Form.pdf ಗೆ ಭೇಟಿ ನೀಡಿ ಅರ್ಜಿಗಳನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು. ಅಗತ್ಯ ದಾಖಲೆಗಳೊಂದಿಗೆ Manager (HR-NS/S&CS), Bharat Electronics Ltd, Jalahalli post, Bengaluru – 560013 ವಿಳಾಸಕ್ಕೆ ಅರ್ಜಿಗಳನ್ನು ಸಲ್ಲಿಸಬೇಕು.
ಸಂಬಳ ಎಷ್ಟು?
ಸೀನಿಯರ್ ಎಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ಹೊಂದಿದವರಿಗೆ ಮಾಸಿಕ 50 ಸಾವಿರ ರೂಪಾಯಿಯಿಂದ 1.6 ಲಕ್ಷ ರೂಪಾಯಿವರೆಗೆ ಸಂಬಳ ಇರಲಿದೆ. ಬೇಸಿಕ್ ಸಂಬಳದ ಜತೆಗೆ ಡಿಎ, ಎಚ್ ಆರ್ ಎ, ಗ್ರೂಪ್ ಇನ್ಶೂರೆನ್ಸ್, ವೈದ್ಯಕೀಯ ಸೇವೆಗಳು ಇರಲಿವೆ. ಮೊದಲಿಗೆ ಐದು ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಕಾರ್ಯದಕ್ಷತೆ ಆಧಾರದ ಮೇಲೆ 7 ವರ್ಷಗಳವರೆಗೆ ಅವಧಿಯನ್ನು ವಿಸ್ತರಣೆ ಮಾಡಲಾಗುತ್ತದೆ.