ಬೆಂಗಳೂರು : ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಬಯಸುತ್ತಿರುವವರಿಗೆ ಶುಭ ಸಮಾಚಾರ ದೊರೆತಿದೆ. ಬೆಳಗಾವಿ ಜಿಲ್ಲಾ ಸಹಕಾರಿ ಬ್ಯಾಂಕಿನಲ್ಲಿ (Belagavi DCCB Recruitment 2026) ಖಾಲಿ ಇರುವ 104 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಸೆಕೆಂಡ್ ಡಿವಿಷನ್ ಕ್ಲರ್ಕ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಬಳ್ಳಾರಿ ಜಿಲ್ಲಾ ಸಹಕಾರಿ ಬ್ಯಾಂಕ್
ಹುದ್ದೆಗಳ ಹೆಸರು: ಸೆಕೆಂಡ್ ಡಿವಿಷನ್ ಕ್ಲರ್ಕ್ ಇತ್ಯಾದಿ
ಒಟ್ಟು ಹುದ್ದೆಗಳು: 104
ಉದ್ಯೋಗ ಸ್ಥಳ: ಬೆಳಗಾವಿ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಆಗಸ್ಟ್ 27
83 ಸೆಕೆಂಡ್ ಡಿವಿಷನ್ ಕ್ಲರ್ಕ್, 1 ಗನ್ ಮ್ಯಾನ್, 20 ಪ್ಯೂನ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಬಿಎ, ಬಿಎಸ್ಸಿ, ಬಿ.ಕಾಂ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ 18ರಿಂದ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಒಬಿಸಿ, ಜನರಲ್ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಎಸ್ಸಿ, ಎಸ್ಟಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 83,700 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ belagavidccb.bank.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಿ, ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಇದನ್ನೂ ಓದಿ : 47 ಅಧಿಕಾರಿಗಳನ್ನು ವಜಾಗೊಳಿಸಿದ ಬೆನ್ನಲ್ಲೇ NTAಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ!



















