ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಾಬಿ ನಡುವೆ ಸತೀಶ್ ಜಾರಕಿಹೊಳಿ ಡಬಲ್ ಎಂಜಿನ್ ಹೊಂದಿರುವ ಹೊಸ ಹೆಲಿಕಾಪ್ಟರ್ ಖರೀದಿ ಮಾಡಿದ್ದಾರೆ.
ಬೆಂಗಳೂರು ಸಮೀಪದ ಜಕ್ಕೂರು ಏರೋಡ್ರೋಮ್‌ನಲ್ಲಿ ನೂತನ ಹೆಲಿಕಾಪ್ಟರ್ ಪರಿಶೀಲನೆ ಮಾಡಿಸಿದ್ದಾರೆ. ”ಶೀಘ್ರ ನೂತನ ಹೆಲಿಕಾಪ್ಟರ್ ನಮ್ಮೊಂದಿಗೆ ಹಾರಾಟಕ್ಕೆ ಸಿದ್ಧವಾಗಲಿದೆ,” ಎಂದು ಸಾಮಾಜಿಕ ಜಾಲತಾಣದಲ್ಲಿ ಫೋಟೋ, ವಿಡಿಯೋ ಹಾಕಿ ಮಾಹಿತಿ ಹಂಚಿಕೊಂಡಿದ್ದಾರೆ.
ಐವರು ಪ್ರಯಾಣಿಕರು, ಇಬ್ಬರು ಪೈಲಟ್‌ಗಳನ್ನು ಸಾಗಿಸುವ ಸಾಮರ್ಥ್ಯ ಹೊಂದಿದ್ದು, ಆಧುನಿಕ ಸುರಕ್ಷಾ ವ್ಯವಸ್ಥೆ ಹೊಂದಿರುವ ಡಬಲ್ ಎಂಜಿನ್‌ನ ಹೆಲಿಕಾಪ್ಟರ್ ಅಪಘಾತದ ಸಂದರ್ಭದಲ್ಲಿ ಪ್ರಯಾಣಿಕರಿಗೆ ಸುರಕ್ಷತೆ ಒದಗಿಸುತ್ತದೆ ಹಾಗೂ ಸುಧಾರಿತ ವೈರ್‌ಲೆಸ್ ಸಂವಹನ ವ್ಯವಸ್ಥೆ ಹೊಂದಿದೆ.
ಸತೀಶ ಜಾರಕಿಹೊಳಿ ಉತ್ತರ ಕರ್ನಾಟಕದಲ್ಲಿ ಸ್ವಂತ ಹೆಲಿಕಾಪ್ಟರ್ ಹೊಂದಿರುವ ಮೊದಲ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಆಪ್ತ ಬಳಗದಲ್ಲಿ, ಅದರಲ್ಲೂ ಅಹಿಂದ ನಾಯಕರಾಗಿ ಗುರುತಿಸಿಕೊಂಡಿದ್ದು, ರಾಜ್ಯಾದ್ಯಂತ ಪಕ್ಷ ಸಂಘಟನೆ ಸೇರಿದಂತೆ ಮುಂಬರುವ ವಿಧಾನಸಭೆ ಚುನಾವಣಾ ಸಿದ್ಧತೆಗೆ ನೂತನ ಹೆಲಿಕಾಪ್ಟರ್ ಖರೀದಿ ಎಂಬ ಚರ್ಚೆ ಕೈ ಪಾಳಯದಲ್ಲಿ ನಡೆಯುತ್ತಿದೆ