ಬೆಳಗಾವಿ : ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಗೆ ಸಿದ್ಧತೆ ನಡೆಯುತ್ತಿದ್ದು, ಸವದತ್ತಿ ತಾಲೂಕಿನ ಅಭ್ಯರ್ಥಿಯನ್ನು ಬಾಲಚಂದ್ರ ಜಾರಕಿಹೊಳಿ ಘೋಷಣೆ ಮಾಡಿದ್ದಾರೆ.
ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ, ವಿರೂಪಾಕ್ಷ ಮಾಮನಿ ಹೆಸರು ಘೋಷಣೆ ಮಾಡಿದ್ದಾರೆ.
ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಸವದತ್ತಿಯಿಂದ ಕಣಕ್ಕಿಳಿಯಲಿದ್ದಾರೆ. ಈ ಮೊದಲು ರತ್ನಾ ಮಾಮನಿ ಸವದತ್ತಿಯ ಡಿಸಿಸಿ ಬ್ಯಾಂಕ್ ನಿರ್ದೇಶಕಿಯಾಗಿ ಚುನಾಯಿತರಾಗಿದ್ದರು.
ಈಗ ರತ್ನಾ ಬದಲು ವಿರೂಪಾಕ್ಷ ಮಾಮನಿಗೆ ಬಾಲಚಂದ್ರ ಜಾರಕಿಹೊಳಿ ಮಣೆ ಹಾಕಿದ್ದಾರೆ.