ಬೆಳಗಾವಿಯಲ್ಲಿ ಡಿಸೆಂಬರ್ 2 ರಿಂದ 11 ರವರೆಗೆ ಚಳಿಗಾಲದ ಅಧಿವೇಶನ ನಡೆಯಲಿದೆ. ವಿಧಾನಸಭೆ ಕಾರ್ಯದರ್ಶಿಗಳು ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.
ಒಟ್ಟು 9 ದಿನಗಳ ಕಾಲ ಈ ಅಧಿವೇಶನ ನಡೆಯಲಿದೆ. ಶನಿವಾರವೂ ಕಲಾಪ ನಡೆಸಲು ಸರ್ಕಾರ ನಿರ್ಧರಿಸಿದೆ.
ಈ ಹಿಂದೆ ನವೆಂಬರ್ 30 ರಿಂದ ಡಿಸೆಂಬರ್ 11 ರವರೆಗೆ ಅಧಿವೇಶನ ನಿಶ್ಚಯವಾಗಿತ್ತು. ಹಿರಿಯೂರು ವಿಧಾನಸಭಾ ಕ್ಷೇತ್ರ ಉಪಚುನಾವಣೆ ಹಿನ್ನೆಲೆಯಲ್ಲಿ ದಿನಾಂಕ ಬದಲಿಸಲಾಗಿದೆ.
ಡಿಸೆಂಬರ್ 2 ರಿಂದ 11 ರವರೆಗೆ ಅಧಿವೇಶನ ನಡೆಸಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

















