ಬೆಂಗಳೂರು : ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಬಳ್ಳಾರಿ ಜಿಲ್ಲಾ ಸಹಕಾರಿ ಬ್ಯಾಂಕ್‌ನಲ್ಲಿ (Bellary DCCB Recruitment 2026) ಖಾಲಿ ಇರುವ 82 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಎಫ್ ಡಿಎ, ಎಸ್ ಡಿಎ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಬಳ್ಳಾರಿ ಜಿಲ್ಲಾ ಸಹಕಾರಿ ಬ್ಯಾಂಕ್
ಹುದ್ದೆಗಳ ಹೆಸರು: ಎಫ್ ಡಿಎ, ಎಸ್ ಡಿಎ ಇತ್ಯಾದಿ
ಒಟ್ಟು ಹುದ್ದೆಗಳು: 82
ಉದ್ಯೋಗ ಸ್ಥಳ: ಬಳ್ಳಾರಿ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮೇ 6
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಡಿಗ್ರಿ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 22 ಎಫ್ ಡಿಎ, 28 ಎಸ್ ಡಿಎ, 1 ವಾಹನ ಚಾಲಕ ಹಾಗೂ 31 ಜೂನಿಯರ್ ಅಸಿಸ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.
ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಕನಿಷ್ಠ 18ರಿಂದ ಗರಿಷ್ಠ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಒಬಿಸಿ, ಜನರಲ್ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಎಸ್ಸಿ, ಎಸ್ಟಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 83,700 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ bellarydcc.bank.inಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಿ, ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಇದನ್ನೂ ಓದಿ : ಆಸ್ಟ್ರೇಲಿಯಾ ಸ್ಟಾರ್ ಕ್ರಿಕೆಟರ್ ಡೇವಿಡ್ ವಾರ್ನರ್ ಬಂಧನ!



















